Breaking News

ಭೀಕರ ಅಪಘಾತ; ದುರ್ಘಟನೆ ಬಳಿಕ ಹೊತ್ತಿಕೊಂಡ ಬೆಂಕಿಯಿಂದ ಇಬ್ಬರು ಪಾರಾಗಿದ್ದೇ ಪವಾಡ

Spread the love

ತುಮಕೂರು: ಬೆಳ್ಳಂಬೆಳಗ್ಗೆ ಎರಡು ಲಾರಿಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಶಿರಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಳ್ಳಂಬೆಳ್ಳ ಬಳಿ ನಡೆದಿದೆ.

ಬೆಂಗಳೂರು ಕಡೆ ತೆರಳುತ್ತಿದ್ದ ಸಿಮೆಂಟ್ ಪೈಪ್‌ಗಳನ್ನು ಹೊತ್ತಿದ್ದ ಲಾರಿ ಮತ್ತು ಕಟ್ಟಿಗೆ ತುಂಬಿದ ಲಾರಿ ಪರಸ್ಪರ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಪರಿಣಾಮ ಕಟ್ಟಿಗೆ ತುಂಬಿದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮಾಹಿತಿ ತಿಳಿದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ದೌಡಾಯಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗುತ್ತಿದ್ದ ಚಾಲಕ ಮತ್ತು ಕ್ಲೀನರ್​ನ್ನು ಬಚಾವ್​ ಮಾಡಿದ್ದಾರೆ.

 

ಇನ್ನು ಅಪಘಾತಕ್ಕೆ ಕಟ್ಟಿಗೆ ತುಂಬಿದ್ದ ಲಾರಿ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗ್ತಿದೆ. ತೀವ್ರವಾಗಿ ಗಾಯಗೊಂಡ ಕಟ್ಟಿಗೆ ಲಾರಿ ಚಾಲಕನನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.


Spread the love

About Laxminews 24x7

Check Also

ಮಿದುಳು ಕ್ಯಾನ್ಸರ್‌ಗೆ ತುತ್ತಾದ ಬಾಲಕಿಗೆ ಜಿಲ್ಲಾಡಳಿತದ ನೆರವು

Spread the loveಗುಬ್ಬಿ: ಆಧಾರ್ ಕಾರ್ಡ್‌ನಲ್ಲಿ ಕನ್ನಡದಲ್ಲಿ ಹೆಸರು ಇಲ್ಲದೆ ಸಮಸ್ಯೆ ಎದುರಿಸಿದ್ದ ಮಿದುಳು ಕ್ಯಾನ್ಸರ್‌ಗೆ ತುತ್ತಾದ ಬಾಲಕಿಗೆ ಜಿಲ್ಲಾಡಳಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ