Breaking News

ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Spread the love

ದೇವನಹಳ್ಳಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2020ನೇ ಸಾಲಿನ ಏಕಲವ್ಯ ಪ್ರಶಸ್ತಿ ಮತ್ತು ನಗದು ಪುರಸ್ಕಾರಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಏಕಲವ್ಯ ಪ್ರಶಸ್ತಿಗೆ ಕಳೆದ 5 ವರ್ಷದಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿರುವ ಜಿಲ್ಲೆಯ ಕ್ರೀಡಾಪಟುಗಳು ಹಾಗೂ 2020ನೇ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ರಾಜ್ಯ ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ನಗದು ಪುರಸ್ಕಾರ ನೀಡಲಾಗುತ್ತದೆ.

ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದವರಿಗೆ, ಪದಕ ವಿಜೇತರಾದವರಿಗೆ ₹ 50 ಸಾವಿರ ನಗದು ಪುರಸ್ಕಾರ ನೀಡಲಾಗುವುದು.

ಏಕಲವ್ಯ ಪ್ರಶಸ್ತಿ ಹಾಗೂ ನಗದು ಪುರಸ್ಕಾರ ಪಡೆಯಲು ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಪಡೆದು ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಆಗಸ್ಟ್ 27 ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಮೊಬೈಲ್‌ 98456 08598 ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ ಆರ್. ತಿಳಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ