Breaking News
Home / ಜಿಲ್ಲೆ / ವಿದ್ಯಾರ್ಥಿಗಳು ಫಲಿತಾಂಶವನ್ನು ತಾಳ್ಮೆ ಮತ್ತು ಧೈರ್ಯದಿಂದ ಸ್ವೀಕರಿಸಬೇಕು.: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ವಿದ್ಯಾರ್ಥಿಗಳು ಫಲಿತಾಂಶವನ್ನು ತಾಳ್ಮೆ ಮತ್ತು ಧೈರ್ಯದಿಂದ ಸ್ವೀಕರಿಸಬೇಕು.: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

Spread the love

ಬೆಳಗಾವಿ: ಎಸ್ಸೆಸ್ಸೆಲ್ಸಿ ಫಲಿತಾಂಶ ಸೋಮವಾರ ಮಧ್ಯಾಹ್ನ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ನೀಡಿರುವ ಮೊಬೈಲ್ ಸಂಖ್ಯೆಗಳಿಗೆ ಫಲಿತಾಂಶ ಬರಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು (33180+40834) 74,014 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ.

ಫಲಿತಾಂಶ ಏನೇ ಬರಲಿ; ಧೃತಿಗೆಡಬೇಡಿ:

ವಿದ್ಯಾರ್ಥಿಗಳು ಫಲಿತಾಂಶವನ್ನು ತಾಳ್ಮೆ ಮತ್ತು ಧೈರ್ಯದಿಂದ ಸ್ವೀಕರಿಸಬೇಕು. ಪಾಲಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಮನೋಬಲ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದ್ದಾರೆ.

ಕೋವಿಡ್-19 ಸಂದರ್ಭದಲ್ಲಿ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿದ್ದೀರಿ. SSLC ಫಲಿತಾಂಶವು ಸಂತಸದಾಯಕ ಹಾಗೂ ಉತ್ತಮವಾಗಿ ಬರುವ ನಿರೀಕ್ಷೆ ಇದೆ.
ಫಲಿತಾಂಶದಲ್ಲಿ ವಿದ್ಯಾರ್ಥಿಗಳು ವಿಫಲಗೊಂಡಲ್ಲಿ ಧೃತಿಗೆಡದೇ ಸಪ್ಟೆಂಬರ್ ದಲ್ಲಿ ಬರುವ ಪೂರಕ ಪರೀಕ್ಷೆಯನ್ನು ಎದುರಿಸಲು ತಯಾರಾಗಬೇಕು.

ಜಿಲ್ಲೆಯ ವಿದ್ಯಾರ್ಥಿಗಳು, ಪಾಲಕರು ಆತ್ಮವಿಶ್ವಾಸದಿಂದ ಇರಬೇಕು. ಯಾವುದೇ ಕಾರಣಕ್ಕೂ ವಿದ್ಯಾರ್ಥಿ ಸಮುದಾಯ ಹಾಗೂ ಪಾಲಕರು ಧೃತಿಗೆಡಬೇಡಬಾರದು. ಮಕ್ಕಳ ಕಲಿಕೆಯನ್ನು ಉತ್ತಮಪಡಿಸಲು ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯತಿ ಸದಾ ತಮ್ಮೊಂದಿಗೆ ಇರಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಭರವಸೆ ನೀಡಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ