Breaking News

ಹೊಸ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್..! , 13 ಜಿಲ್ಲೆಗಳಿಗೆ ಯಾವುದೇ ಸಚಿವ ಸ್ಥಾನ ದೊರೆತಿಲ್ಲ.

Spread the love

ಬೆಂಗಳೂರು, ಆ.4- ಬೊಮ್ಮಾಯಿ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಸಂಪುಟದಲ್ಲಿ ಏಳು ಮಂದಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ರಾಜ್ಯದ ಆರು ಜಿಲ್ಲೆಗಳಿಗೆ ತಲಾ ಎರಡು ಸಚಿವ ಸ್ಥಾನಗಳನ್ನು ನೀಡಿದರೆ ಬೆಂಗಳೂರು ನಗರ ಜಿಲ್ಲೆಗೆ 7 ಸಚಿವ ಸ್ಥಾನ ನೀಡಲಾಗಿದೆ. ಮುಂಬರುವ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು 7 ಶಾಸಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಆರ್.ಅಶೋಕ್, ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಮುನಿರತ್ನ, ವಿ.ಸೋಮಣ್ಣ, ಗೋಪಾಲಯ್ಯ , ಅಶ್ವತ್ಥನಾರಾಯಣ್ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಸುರೇಶ್‍ಕುಮಾರ್, ಅರವಿಂದ ಲಿಂಬಾವಳಿ ಅವರನ್ನು ಕೈ ಬಿಡಲಾಗಿದೆ. ಸರ್ಕಾರ ರಚನೆ ಸಂದರ್ಭದಲ್ಲಿ ಕೈ ಹಿಡಿದಿದ್ದ ಮುನಿರತ್ನ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಲಾಗಿದೆ.ಕಳೆದ ಬಾರಿ ರಾಜಧಾನಿ ಬೆಂಗಳೂರಿಗೆ 9 ಮಂದಿಗೆ ಸ್ಥಾನ ನೀಡಲಾಗಿತ್ತು. ಅದರಲ್ಲಿ ಸುರೇಶ್‍ಕುಮಾರ್, ಲಿಂಬಾವಳಿ ಅವರನ್ನು ಕೈ ಬಿಡಲಾಗಿದೆ.
ಹಾವೇರಿ, ದಕ್ಷಿಣ ಕನ್ನಡ, ಧಾರವಾಡ, ಶಿವಮೊಗ್ಗ , ತುಮಕೂರು, ಬಾಗಲಕೋಟೆ ಜಿಲ್ಲೆಗಳಿಗೆ ಡಬಲ್ ಧಮಾಕ , ಈ ಜಿಲ್ಲೆಗಳ ಇಬ್ಬರು ಶಾಸಕರುಗಳಿಗೆ ಸಚಿವ ಸ್ಥಾನ ನೀಡಲಾಗಿದೆ. 13 ಜಿಲ್ಲೆಗಳಿಗೆ ಯಾವುದೇ ಸಚಿವ ಸ್ಥಾನ ದೊರೆತಿಲ್ಲ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ