ಬೆಂಗಳೂರು: ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಎಂದು ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.