ಬೆಂಗಳೂರು: ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿದ್ದ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಆಯುಕ್ತರು ಶಾಕ್ ನೀಡಿದ್ದಾರೆ. ಒಂದೇ ಕಡೆ ಇದ್ದು ಹಿಡಿತ ಸಾಧಿಸಿದವರನ್ನು ಎತ್ತಂಗಡಿ ಮಾಡಲಾಗಿದೆ.
1817 ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಇರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.
127 ಪಿಎಸ್‌ಐ, 130 ಎಸ್‌ಎಸ್‌ಐ, 999 ಹೆಡ್ ಕಾನ್ಸ್ಟೇಬಲ್, 561 ಕಾನ್ಸ್ಟೇಬಲ್ ಸೇರಿದಂತೆ 1817 ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ದೀರ್ಘಾವಧಿ ಒಂದೇ ಠಾಣೆಯಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅವರ ಜೇಷ್ಠತೆ ಆಧಾರದಲ್ಲಿ ಕೌನ್ಸೆಲಿಂಗ್ ನಡೆಸಿ ವರ್ಗಾವಣೆ ಮಾಡಲಾಗಿದೆ.
Laxmi News 24×7