Breaking News

ಅನೇಕ ವರ್ಷಗಳಿಂದ ಒಂದೇ ಕಡೆ ಇದ್ದವರಿಗೆ ಬಿಗ್ ಶಾಕ್: 1817 ಪೊಲೀಸ್ ಸಿಬ್ಬಂದಿ ಎತ್ತಂಗಡಿ

Spread the love

ಬೆಂಗಳೂರು: ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿದ್ದ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಆಯುಕ್ತರು ಶಾಕ್ ನೀಡಿದ್ದಾರೆ. ಒಂದೇ ಕಡೆ ಇದ್ದು ಹಿಡಿತ ಸಾಧಿಸಿದವರನ್ನು ಎತ್ತಂಗಡಿ ಮಾಡಲಾಗಿದೆ.

1817 ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಇರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.

127 ಪಿಎಸ್‌ಐ, 130 ಎಸ್‌ಎಸ್‌ಐ, 999 ಹೆಡ್ ಕಾನ್ಸ್ಟೇಬಲ್, 561 ಕಾನ್ಸ್ಟೇಬಲ್ ಸೇರಿದಂತೆ 1817 ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ದೀರ್ಘಾವಧಿ ಒಂದೇ ಠಾಣೆಯಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅವರ ಜೇಷ್ಠತೆ ಆಧಾರದಲ್ಲಿ ಕೌನ್ಸೆಲಿಂಗ್ ನಡೆಸಿ ವರ್ಗಾವಣೆ ಮಾಡಲಾಗಿದೆ.


Spread the love

About Laxminews 24x7

Check Also

ನಷ್ಟದಲ್ಲಿರುವ ಉದ್ಯಮಗಳಿಗೆ ಡಿಸಿಸಿ ಬ್ಯಾಂಕ್ ಸಾಲ ನೀಡದಂತೆ ಆಗ್ರಹ

Spread the loveಬೆಳಗಾವಿ : ಬಿಡಿಸಿಸಿ ಬ್ಯಾಂಕ್ ಜಿಲ್ಲೆಯಲ್ಲಿ ನಷ್ಟದಲ್ಲಿರುವ ಕೆಲವು ಕಾರ್ಖಾನೆ ಮತ್ತು ಉದ್ಯಮಗಳಿಗೆ ಕೋಟ್ಯಂತರ ರೂಪಾಯಿ ಸಾಲ ಕೊಡಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ