ಬೆಂಗಳೂರು: ವರ್ಷ ಕೊರೋನಾ ಭೀತಿಯ ನಡುವೆಯೂ ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿತ್ತು. ಪರೀಕ್ಷೆಯನ್ನು ಯಶಸ್ವಿಯಾಗಿಯೂ ನಡೆಸಿತ್ತು. ಆದರೆ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಫಲಿತಾಂಶ ಕಡಿಮೆಯಾಗಿದೆ.
ಕಳೆದ ವರ್ಷ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಶೇ.73.70ರಷ್ಟು ಫಲಿತಾಂಶ ಬಂದಿತ್ತು. ಆದರೆ, ಈ ವರ್ಷ ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಹೆದರಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಆಗಮಿಸಿರಲಿಲ್ಲ. ಅಲ್ಲದೆ, ಕೆಲವು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆಗೆ ಒಳಗಾಗಿದ್ದಾರೆ. ಪರಿಣಾಮ ಈ ವರ್ಷದ ಫಲಿತಾಂಶ ಶೇ.71.80ರಷ್ಟು ಬಂದಿದೆ.
ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 5,82,316 ವಿದ್ಯಾರ್ಥಿಗಳು ಪಾಸ್ ಆಗಿದ್ದರೆ, 2,28,734 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ರಾಜ್ಯದ ಸರ್ಕಾರಿ ಶಾಲೆಗಳು ಈ ವರ್ಷ ಶೇ.72.79 ರಷ್ಟು ಫಲಿತಾಂಶ ನೀಡಿವೆ.
ಇನ್ನೂ ಎಂದಿನಂತೆ ಈ ಈ ವರ್ಷವೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯದಲ್ಲಿ ಶೇ.77.74 ರಷ್ಟು ವಿದ್ಯಾರ್ಥಿನಿಯರು ಪಾಸ್ ಆಗಿದ್ದರೆ, ಶೇ. 66.41 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.