Breaking News

ಯಾವುದೇ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರಂನ್ನು ನಿರ್ಬಂಧಿಸುವ ಯೋಜನೆ ಇಲ್ಲ

Spread the love

ಚಂದ್ರಶೇಖರ್ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷಕಾರಿ ಅಂಶಗಳ ಬಗ್ಗೆ ಬಳಕೆದಾರರರಿಂದ ವಿವಿಧ ದೂರುಗಳನ್ನು ಸರ್ಕಾರ ಸ್ವೀಕರಿಸಿದ್ದು, ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸಿದೆ, ಸದ್ಯ ದೇಶದಲ್ಲಿ ಯಾವುದೇ ಸಾಮಾಜಿಕ ಮಾಧ್ಯ ಫ್ಲಾಟ್ ಫಾರಂಗಳನ್ನು ನಿರ್ಬಂಧಿಸುತ್ತಿಲ್ಲ ಎಂದು ಅವರು ಹೇಳಿದರು.

ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 69ಎ ಅಡಿಯಲ್ಲಿ ದೇಶದ ರಕ್ಷಣೆ, ಭದ್ರತೆ, ಏಕತೆ ಮತ್ತು ಸಾರ್ವಭೌಮತ್ವ ವಿದೇಶಗಳೊಂದಿಗೆ ಸ್ನೇಹಪೂರ್ವಕ ಸಂಬಂಧ ಅಥವಾ ಕಾನೂನು ಹಿತದೃಷ್ಟಿಯಿಂದ ದುರುದ್ದೇಶಪೂರಿತ ಆನ್‌ಲೈನ್ ವಿಷಯಗಳನ್ನು ಸರ್ಕಾರ ನಿರ್ಬಂಧಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಸಾಮಾಜಿಕ ಮಾಧ್ಯಮಗಳನ್ನು ನಿರ್ಬಂಧಿಸುವ ನೀತಿ ರೂಪಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರದ ನೀತಿಗಳು ನ್ಯಾಯಯುತ, ಮುಕ್ತ ಮತ್ತು ವಿಶ್ವಾಸಾರ್ಹ ಅಂತರ್ಜಾಲವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿವೆ ಮತ್ತು 2000 ಐಟಿ ಕಾಯ್ದೆ ಮತ್ತು ನಿಯಮಗಳು ಸೇರಿದಂತೆ ದೇಶದ ಕಾನೂನುಗಳನ್ನು ಪಾಲಿಸುವ ಮಧ್ಯವರ್ತಿಗಳಿಗೆ ದೇಶದಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ