Breaking News

ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

Spread the love

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಿಂದ ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆಮಾಡಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದವರಿಗೆ ಗೌರವಧನವಾಗಿ 25.07 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

2, 4 ಮತ್ತು 6 ನೇ ಸೆಮಿಸ್ಟರ್ ಪಾಠ ಮಾಡಲು ನೇಮಕ ಮಾಡಿಕೊಳ್ಳಲಾಗಿದ್ದ ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಅಂತೆಯೇ ಕಾಲೇಜು ಶಿಕ್ಷಣ ಇಲಾಖೆ ಪ್ರಸ್ತಾವನೆ ಸ್ವೀಕರಿಸಿ 25.07 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಮೇ ತಿಂಗಳಲ್ಲಿ ನೇಮಕವಾದ ಉಪನ್ಯಾಸಕರಿಗೆ 10.55 ಕೋಟಿ ರೂ., ಜೂನ್ ತಿಂಗಳಲ್ಲಿ ನೇಮಕವಾದ ಉಪನ್ಯಾಸಕರಿಗೆ 14.52 ಕೋಟಿ ರೂ. ನೀಡಲಾಗುವುದು ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ