Breaking News

ಕೇಳಿದ ಪ್ರಶ್ನೆಯನ್ನೇ ಪದೇ ಪದೇ ಕೇಳಿ ಕಾಲಹರಣ ಮಾಡಿದರು: ಇ.ಡಿ ದಾಳಿ ಬಗ್ಗೆ ಬೇಗ್‌

Spread the love

ಬೆಂಗಳೂರು: ಮಾಜಿ ಸಚಿವ ರೋಷನ್‌ ಬೇಗ್‌ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನಡೆಸಿದ್ದ ದಾಳಿ ಶುಕ್ರವಾರ ಬೆಳಗಿನ ಜಾವ ಮುಕ್ತಾಯಗೊಂಡಿದೆ.

ಸತತ 23 ಗಂಟೆಗಳ ಕಾಲ ದಾಖಲೆಗಳ ಹುಡುಕಾಟ, ವಿಚಾರಣೆ ನಡೆಸಿ ಬೆಳಗಿನ ಜಾವ ಅಧಿಕಾರಿಗಳ ವಾಪಸ್ ಹೋಗಿದೆ. ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ದಾಳಿ ಬಗ್ಗೆ ಪ್ರತಿಕ್ರಿಯಿಸಿದ ರೋಷನ್ ಬೇಗ್‌, ‘ಅಕ್ರಮ ಹಣಕಾಸು ವ್ಯವಹಾರ(ಮನಿ ಲಾಂಡ್ರಿಂಗ್) ನಡೆದಿದೆಯೇ ಎಂಬುದರ ಬಗ್ಗೆ ಇ.ಡಿ ಅಧಿಕಾರಿಗಳು ಶೋಧ ನಡೆಸಿದರು. ಎರಡು-ಮೂರು ಗಂಟೆಗಳಲ್ಲೇ ನಡೆಯಬೇಕಿದ್ದ ಶೋಧವನ್ನು ಅನಗತ್ಯವಾಗಿ ವಿಳಂಬ ಮಾಡಿದರು. ಕೇಳಿದ ಪ್ರಶ್ನೆಗಳನ್ನೇ ಪದೇ ಪದೇ ಕೇಳಿ ಕಾಲಹರಣ ಮಾಡಿದರು. 2004ರಿಂದ ಚುನಾವಣಾ ಆಯೋಗಕ್ಕೆ, ಪ್ರತಿವರ್ಷ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಕೆ ಮಾಡಿದ್ದೇವೆ. ಆ ಎಲ್ಲಾ ದಾಖಲೆಗಳನ್ನು ಅವರಿಗೆ ಹಾಜರುಪಡಿಸಿದ್ದೇವೆ. ಯಾವುದೇ ತಪ್ಪಿಲ್ಲ ಎಂಬುದು ಅವರಿಗೆ ಮನವರಿಕೆ ಆಗಿದೆ’ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ