ಬೆಳಗಾವಿ: ಕಳೆದ 10 ತಿಂಗಳಿನಿಂದ ಸರ್ಕಾರ ವಿಧವಾ, ಅಂಗ್ಯವಿಕಲ, ವೃದ್ಯಾಪ್ಯ ವೇತನ ನೀಡದಿರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ತಕ್ಷಣ ಪರಿಹಾರ ಕೊಡಿಸುವಂತೆ ಅಗಸಗಿ ಗ್ರಾಮಸ್ಥರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ಇಲ್ಲಿನ ಕಾಂಗ್ರೆಸ್ ನೂತನ ಕಚೇರಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಗ್ರಾಮಸ್ಥರು ತಮ್ಮ ಅಳಲುತೋಡಿಕೊಂಡರು.
ಕೊರೊನಾ ಲಾಕ್ ಡೌನ್ ನಿಂದಾಗಿ ಸಾಕಷ್ಟು ತೊಂದರೆಯಾಗಿದೆ. ಜೀವನಕ್ಕೆ ಆಧಾರವಾಗಿದ್ದ ಪಿಂಚಣಿ ಹಣ ಕಳೆದ ಹತ್ತು ತಿಂಗಳಿಂದ ಬಂದಿಲ್ಲ. ಹೀಗಾಗಿ ಜೀವನ ನಡೆಸುವುದು ಕಷ್ಟಕರವಾಗಿದೆ. ತಕ್ಷಣ ಈ ಕುರಿತು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
ಇನ್ನು ಇದೇ ಅಗಸಗಾ ಗ್ರಾಮದಲ್ಲಿ ಕಳೆದ ಒಂದು ವರ್ಷದಿಂದ ಲೈನ್ ಮನ್ ಹುದ್ದೆ ಖಾಲಿ ಇದೆ. ಸರಿಯಾದ ಸಮಯಕ್ಕೆ ವಿದ್ಯುತ್ ನಿರ್ವಹಣೆ ಇಲ್ಲದೆ. ಇದರಿಂದಾಗಿ ಗ್ರಾಮಸ್ಥರಿಗೆ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ. ಕೂಡಲೇ ಒಬ್ಬ ಲೈನ್ ಮನ್ ನೇಮಕ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ್, ಸಗಸಗಾ ಗ್ರಾಮಸ್ಥ ಗುಂಡು ಕುರೆನ್ನವರ್ ಸೇರಿದಂತೆ ಮುಂತಾದವರು ಇದ್ದರು.
Laxmi News 24×7