Breaking News
Home / ಜಿಲ್ಲೆ / ಬೆಂಗಳೂರು / 2ನೇ ಅಲೆಯ ಇಳಿಕೆಯ ನಂತ್ರ, ಕೊರೋನಾ 3ನೇ ಅಲೆಯ ಆರಂಭದ ಮುನ್ಸೂಚನೆ ಮತ್ತೆ ಲಾಕ್ ಡೌನ್ ಫಿಕ್ಸ್?

2ನೇ ಅಲೆಯ ಇಳಿಕೆಯ ನಂತ್ರ, ಕೊರೋನಾ 3ನೇ ಅಲೆಯ ಆರಂಭದ ಮುನ್ಸೂಚನೆ ಮತ್ತೆ ಲಾಕ್ ಡೌನ್ ಫಿಕ್ಸ್?

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಇಳಿಕೆಯ ನಂತ್ರ, ಈಗ ಕೊರೋನಾ 3ನೇ ಅಲೆಯ ಆರಂಭದ ಮುನ್ಸೂಚನೆ ದೊರೆತಿದೆ. ಇದೇ ಕಾರಣದಿಂದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಸಭೆ ಕೂಡ ನಡೆಯುತ್ತಿದೆ. ಈ ಸಭೆಯಲ್ಲಿ ಕೊರೋನಾ ಪಾಸಿಟಿವಿಟಿ ದರ ಹೆಚ್ಚಿರುವಂತ ಜಿಲ್ಲೆಗಳಲ್ಲಿ ಕಠಿಣ ರೂಲ್ಸ್ ಜಾರಿಗೆ ಸೂಚಿಸಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ( Karnataka Lockdown ) ಫಿಕ್ಸ್ ಎಂದೇ ಹೇಳಲಾಗುತ್ತಿದೆ.

 

ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಅಧ್ಯಕ್ಷತೆಯಲ್ಲಿ ಮಹತ್ವದ ಕೊರೋನಾ 3ನೇ ಅಲೆಯ ( Corona 3rd Wave ) ತಡೆಯ ಸಂಬಂಧ ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಸಚಿವರು, ತಜ್ಞರು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದಾರೆ. ಈ ಸಭೆಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಿರುವಂತ ಜಿಲ್ಲೆಗಳಲ್ಲಿ ಕಠಿಣ ನಿಯಮ ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿರೋದಾಗಿ ತಿಳಿದು ಬಂದಿದೆ.

ಗೂ ಉಡುಪಿ ಜಿಲ್ಲೆಗಳಲ್ಲಿ ಕಠಿಣ ನಿಯಮ ಜಾರಿಗೆ ಸೂಚಿಸಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಬೆಂಗಳೂರು ನಗರದಲ್ಲೂ ಕೊರೋನಾ 3ನೇ ಅಲೆಯ ತಡೆಗೆ ಪ್ರತ್ಯೇಕ ಕ್ರಮಕ್ಕೆ ಸೂಚಿಸಿದೆ.

 

ಅಂದಹಾಗೇ ಕಳೆದ 7 ದಿನಗಳಿಂದ ಈ ಆರು ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ದರದಲ್ಲಿ ( Corona Positivity Rate ) ಹೆಚ್ಚಳಗೊಂಡಿರೋದಾಗಿ ತಿಳಿದು ಬಂದಿದೆ. ಶೇ.2ಕ್ಕಿಂತ ಹೆಚ್ಚು ಕೊರೋನಾ ಪಾಸಿಟಿವಿಟಿ ದರ ಏರಿಕೆಯಾದಂತ ಜಿಲ್ಲೆಗಳಲ್ಲಿ ಕಠಿಣ ನಿಯಮ ಜಾರಿ ಕುರಿತಂತೆಯೂ ಇಂದಿನ ಕೊರೋನಾ 3ನೇ ಅಲೆ ನಿಯಂತ್ರಣ ಸಭೆಯಲ್ಲಿ ಚರ್ಚಿಸಲಾಗುತ್ತಿದೆ.

 

ಇದಲ್ಲದೇ ಕೊರೋನಾ 3ನೇ ಅಲೆಯ ನಿಯಂತ್ರಣ ಕ್ರಮಗಳು, ಕೊರೋನಾ ಲಸಿಕೆಯ ಲಭ್ಯತೆ, ಸೇರಿದಂತೆ ವಿವಿಧ ವಿಚಾರಗಳ ಕುರಿತು ಮಹತ್ವದ ಸಭೆ ನಡೆಯುತ್ತಿದ್ದು, ಸಭೆಯ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಸಭೆಯ ನಿರ್ಣಯಗಳ ಕುರಿತಂತೆ ಮಾಹಿತಿ ನೀಡಲಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ