ಬೆಂಗಳೂರು – ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಇರಲಿದೆ.
ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ತಜ್ಞರ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರಲಿದೆ.
ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಕೂಡ ಹಾಕಲು ನಿರ್ಧರಿಸಲಾಗಿದೆ.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ದಕ್ಷಿಣ ಕನ್ನಡ, ಬೀದರ್, ಕಲಬುರಗಿಗಳಲ್ಲಿ ನೈಟ್ ಮತ್ತು ವೀಕ್ ಎಂಡ್ ಎರಡೂ ಕರ್ಫ್ಯೂ ಜಾರಿಯಾಗಲಿದೆ.
ಆದರೆ ಈ ಬಾರಿಯ ವೀಕ್ ಎಂಡ್ ಕರ್ಫ್ಯೂ ಯಾವ ರೀತಿ ಇರಲಿದೆ ಎನ್ನುವುದು ಇನ್ನಷ್ಟೆ ಗೊತ್ತಾಗಬೇಕಿದೆ. ಶನಿವಾರ ಮತ್ತು ಭಾನುವಾರ ದಿನಸಿ, ತರಕಾರಿಗಳು ಸಿಗಲಿದೆಯೇ ಎನ್ನುವುದು ಗೊತ್ತಾಗಿಲ್ಲ. ಯಾವುದಕ್ಕೆಲ್ಲ ಅವಕಾಶವಿದೆ? ಬಸ್ ಓಡಾಟ ಇರಲಿದೆಯೇ? ಸರಕಾರಿ ಕಚೇರಿಗಳು ಇರಲಿವೆಯೇ? ಎನ್ನುವುದು ಗೊತ್ತಾಗಬೇಕಿದೆ.
Laxmi News 24×7