ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಭರ್ಜರಿ ಕಾರ್ಯಾಚರಣೆಯಲ್ಲಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಇನ್ನು, ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ವಿದೇಶಿ ಪ್ರಜೆ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. 15 ಕೆಜಿ ಹಶೀಶ್ ಎಣ್ಣೆ, 10 ಕೆಜಿ ಗಾಂಜಾ, ಎಕ್ಸ್ಟಸಿ ಮಾತ್ರೆ ಜಪ್ತಿ ಮಾಡಲಾಗಿದೆ.
![](https://assets-news-bcdn.dailyhunt.in/cmd/resize/400x400_80/fetchdata16/images/ff/fe/fb/fffefbc3dd11ff003adb1a619c17af87547e51261c048b63bd11a44273d7a869.jpg)
ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಿಂಗ್ ಪಿನ್ ಈಗ ಸಿಸಿಬಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ನಾಲ್ವರು ಆರೋಪಿಗಳು ಜೈಲು ಕಂಬಿ ಎಣಿಸುತ್ತಿದ್ದಾರೆ.