ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ರೈತರು ಹಾಗು ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಲಾಕ್ಡೌನ್ ಸಡಲಿಕೆ ನಂತರ ವ್ಯಾಪಾರ ವಹಿವಾಟು ಸಹಜ ಸ್ಥಿತಿಗೆ ಮರಳುವುದರೊಳಗೆ ಮತ್ತೆ ಕರ್ಫ್ಯೂ ಜಾರಿಯಾಗಿದ್ದರಿಂದ ರೈತರು ಮತ್ತು ವ್ಯಾಪಾರಸ್ಥರನ್ನು ಸಂಕಷ್ಟಕ್ಕೆ ತಳ್ಳಿದೆ.

ಮಧ್ಯಾಹ್ನ 2 ಗಂಟೆಯವರೆಗೂ ತರಕಾರಿ ಖರೀದಿ ಮತ್ತು ಮಾರಾಟಕ್ಕೆ ಅವಕಾಶ ಇದ್ದರೂ ಮಾರ್ಕೆಟ್ಗೆ ಜನ ಬರುತ್ತಿಲ್ಲ ಎಂದು ಗೋಳಾಡುತ್ತಿರುವ ವ್ಯಾಪಾರಸ್ಥರು, ದಿಢೀರ್ ಕರ್ಫ್ಯೂನಿಂದ ವಹಿವಾಟು ಬಂದ್ ಆಗಿದೆ ಎನ್ನುತ್ತಿದ್ದಾರೆ.

ಇನ್ನು ಕಲಬುರಗಿ ಹೊರವಲಯದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಫುಲ್ ಡಲ್ ಆಗಿದ್ದು ವ್ಯಾಪಾರ ಇಲ್ಲದೆ ತರಕಾರಿ ಹಾಳಾಗುವ ಆತಂಕದಲ್ಲಿ ಮಾರಲು ತಂದಿದ್ದ ತರಕಾರಿಗಳನ್ನು ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ,
Laxmi News 24×7