Breaking News
Home / ರಾಜ್ಯ / ಜಾವೆಲಿನ್ ಥ್ರೋನಲ್ಲಿ ಚಿನ್ನಕ್ಕೆ ಗುರಿಯಿಟ್ಟ ನೀರಜ್ ಚೋಪ್ರಾ ಭಾರತದಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿತು.

ಜಾವೆಲಿನ್ ಥ್ರೋನಲ್ಲಿ ಚಿನ್ನಕ್ಕೆ ಗುರಿಯಿಟ್ಟ ನೀರಜ್ ಚೋಪ್ರಾ ಭಾರತದಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿತು.

Spread the love

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ಬಂಗಾರದ ಬರ ನೀಗಿದೆ. ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದು ಕೊಂಡಿದ್ದಾರೆ.

ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದರು. ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದ ನೀರಜ್, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಆದರೆ ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು.

ನಾಲ್ಕನೇ ಸುತ್ತಿನಲ್ಲಿ ಫೌಲ್ ಆಯಿತು. ಐದನೇ ಸುತ್ತು ಕೂಡಾ ಫೌಲ್ ಆಯಿತು. ಅಂತಿಮ ಸುತ್ತಿನವರೆಗೂ ಗರಿಷ್ಠ ದೂರ ಕಾಪಾಡಿದ ನೀರಜ್ ಚೋಪ್ರಾ ಜಯಶಾಲಿಯಾದರು.

 

13 ವರ್ಷದ ಬಳಿಕ ಚಿನ್ನ: ಭಾರತದ ಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿತು. 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ 100 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ ಬಂಗಾರದ ಪದಕ ಗೆದ್ದುಕೊಂಡಿದ್ದರು.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ