Breaking News

ಮುಖ್ಯಮಂತ್ರಿಗಳ ಆಪ್ತ ಸಹಾಯಕ ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಗರಂ

Spread the love

ಬೆಂಗಳೂರು,ಆ.7- ನನಗೆ ಇನ್ಸಲ್ಟ್ ಮಾಡ್ತೀರಾ? ಎಂದು ಮುಖ್ಯಮಂತ್ರಿಗಳ ಆಪ್ತ ಸಹಾಯಕ ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ರೇಗಾಡಿದ್ದಾರೆಂದು ಮಾಹಿತಿ ಸಿಕ್ಕಿದೆ. ಆರ್.ಟಿ.ನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ಶಾಸಕ ರೇಣುಕಾಚಾರ್ಯ ಆಗಮಿಸಿದ್ದರು. ಈ ವೇಳೆ ಅವರನ್ನು ಪೊಲೀಸರು ತಡೆದಿದ್ದರು. ಇದರಿಂದ ಕೋಪಗೊಂಡ ರೇಣುಕಾಚಾರ್ಯ,ಪೊಲೀಸರು ಹಾಗೂ ಸಿಎಂ ಆಪ್ತ ಸಹಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗ್ತಿದೆ.

ನಾನೊಬ್ಬ ಶಾಸಕ, ನನಗೆ ಇನ್ಸಲ್ಟ್ ಮಾಡ್ತೀರಾ? ಇದು ಎರಡನೇ ಸಲ ಈ ರೀತಿ ಆಗ್ತಿರೋದು. ಹೀಗಾದರೆ, ನಾನು ಇಲ್ಲಿಗೆ ಬರೋದೇ ಇಲ್ಲ ಎಂದು ಕೂಗಾಡಿದ್ದಾರೆ. ನಂತರ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದು, ಇನ್ನುಮುಂದೆ ಈ ರೀತಿ ಆದರೆ, ನಾನು ಇತ್ತ ಬರುವುದನ್ನೇ ಬಿಟ್ಟು ಬಿಡುತ್ತೇನೆ ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ