Breaking News

ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡ್ತಿರುವ ನಿಮ್ಹಾನ್ಸ್ ಹಾಸ್ಪಿಟಲ್ ನ ಕಾಂಟ್ರಾಕ್ಟ್ ಸಿಬ್ಬಂದಿ

Spread the love

ಬೆಂಗಳೂರು:ನಿಮ್ಹಾನ್ಸ್ ಹಾಸ್ಪಿಟಲ್ ನ ಕಾಂಟ್ರಾಕ್ಟ್ ಸಿಬ್ಬಂದಿಗಳು ಕೆಲಸದ ಟೈಮಿಂಗ್ ವಿಚಾರವಾಗಿ ನಿಮ್ಹಾನ್ಸ್ ಹಾಸ್ಪಿಟಲ್ ಒಳಗೆ ಪ್ರತಿಭಟನೆ ನಡೆಸಿದರು. ಸಿಬ್ಬಂದಿಗಳು ರೇಡಿಯಾಲಜಿ ಡಿಪಾರ್ಟ್ಮೆಂಟ್ ನಲ್ಲಿ ಹೌಸ್ ಕೀಪಿಂಗ್ ಹಾಗೂ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಬಹುತೇಕ ಸಿಬ್ಬಂದಿ ಹೆಣ್ಣು ಮಕ್ಕಳು ಆಗಿರುವುದರಿಂದ ರಾತ್ರಿ ವೇಳೆ ಕೆಲಸ ಮಾಡುವುದು ತೊಂದರೆ ಆಗುತ್ತಿದೆ.

ಹೀಗಾಗಿ ಸಂಜೆ ಏಳು ಗಂಟೆಯವರೆಗೆ ಕೆಲಸ ಮಾಡಲು ಕೇಳಿದರು ಇದಕ್ಕೆ ಒಪ್ಪದ ಹಾಸ್ಪಿಟಲ್ ವಿರುದ್ದ ಒಂದು ತಿಂಗಳಿನಿಂದ ಮಳೆ ಬಿಸಿಲು ಲೆಕ್ಕಿಸದೆ ನಿಮ್ಹಾನ್ಸ್ ಹಾಸ್ಪಿಟಲ್ ನ ಒಳಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ನಿಮ್ಹಾನ್ಸ್ ರೇಡಿಯಾಲಜಿ ಸಿಬ್ಬಂದಿಗಳು ಸುಮಾರು ಇಪ್ಪತ್ತು ವರ್ಷಗಳಿಂದ ಸೇವೆ ಸಲ್ಲಿಸಿದ್ದು. ಇದುವರೆವಿಗೂ ಆಡಳಿತ ಮಂಡಳಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಇದರಿಂದ ದಿಕ್ಕುತೋಚದ ಪರಿಸ್ಥಿತಿಯಲ್ಲಿದ್ದಾರೆ. ಆದರೆ ನಿಮ್ಹಾನ್ಸ್ ಆಡಳಿತ ಮಂಡಳಿಯವರು ನಿನ್ನೆ ಯಿಂದ ಮೀಡಿಯಾಗೂ ಸಿಗದೇ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ