Breaking News

ಬಿಎಸ್​ವೈ-ಬೊಮ್ಮಾಯಿ ಇಬ್ಬರೂ ನನಗೆ ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಎಂಟಿಬಿ ನಾಗರಾಜ್​ ಆಕ್ರೋಶ

Spread the love

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಆನಂದ್​ ಸಿಂಗ್​ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದರು. ಇದೀಗ ಎಂಟಿಬಿ ನಾಗರಾಜ್​ ಕೂಡ ಇದೇ ಹಾದಿ ತುಣಿದಿದ್ದು, ಇನ್ನೆರಡು ದಿನದಲ್ಲಿ ಮುಂದಿನ ನಿರ್ಧಾರ ಪ್ರಕಟಿಸುವೆ ಎಂದು ಟ್ವೀಟ್​ ಮೂಲಕ ಎಚ್ಚರಿಸಿದ್ದಾರೆ.

ನಾನು ಕೇಳಿರೋದೇ ಒಂದು, ಕೊಟ್ಟಿರೋದೇ ಮತ್ತೊಂದು. ನನಗೆ ಕೊಟ್ಟಿರುವ ಖಾತೆಯನ್ನು ಬದಲಾವಣೆ ಮಾಡಬೇಕೆಂದು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೇಳುವೆ. ನನ್ನಿಷ್ಟದ ಖಾತೆ ಕೊಡದಿದ್ದರೆ ನನ್ನ ದಾರಿಯನ್ನ ನಾನೇ ನೋಡಿಕೊಳ್ಳುವೆ ಎಂದು ಪ್ರವಾಸೋದ್ಯಮ ಸಚಿವ ಆನಂದ್​ ಸಿಂಗ್​ ಆಕ್ರೋಶ ಹೊರ ಹಾಕಿದ್ದರು.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ವಸತಿ ಖಾತೆ ನಿರ್ವಹಿಸುತ್ತಿದ್ದೆ. ನಿರೀಕ್ಷಿತ ಅನುದಾನ ಸಿಗಲಿಲ್ಲ ಹಾಗೂ ಅಧಿಕಾರವಿದ್ದರೂ ಜನಸೇವೆಗೆ ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕೆ ಬೇಸತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ರಚನೆಯಲ್ಲಿ ನಾನೂ ಕಾರಣನಾದೆ. ಆದರೆ, ನಿರೀಕ್ಷಿತ ಖಾತೆ ಸಿಗಲಿಲ್ಲ. ಹಿಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ನೂತನ ಸಿಎಂ ಬಸವರಾಜ ಬೊಮ್ಮಾಯಿ ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ಹೊರ ಹಾಕಿದ್ದಾರೆ. ಈ ಬಗ್ಗೆ ಎರಡ್ಮೂರು ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸಲಿದ್ದೇನೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ರೈತರು ಉತ್ಪಾದಿಸುವ ಆಹಾರ ಧಾನ್ಯಗಳ ಖರೀದಿ ಜವಾಬ್ದಾರಿ ಎಫ್​​​ಸಿಐಗೆ ವಹಿಸಿ: ಈರಣ್ಣ ಕಡಾಡಿ

Spread the loveಬೆಂಗಳೂರು: ರೈತರು ಉತ್ಪಾದಿಸುವ ಆಹಾರ ಧಾನ್ಯಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದರ ಜವಾಬ್ದಾರಿಯನ್ನು ಭಾರತೀಯ ಆಹಾರ ನಿಗಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ