ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಸಂಪುಟ ದರ್ಜೆ ಸಚಿವರ ಸೌಲಭ್ಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಾವಧಿ ಇರುವವರೆಗೆ ಬಿ.ಎಸ್. ಯಡಿಯೂರಪ್ಪನವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಈ ಆದೇಶ ಹೊರಡಿಸಲಾಗಿದ್ದು, ಇನ್ಮುಂದೆ ಬಿ.ಎಸ್.ವೈ.ಗೆ ಸಚಿವರಿಗೆ ಸಿಗುವ ಎಲ್ಲಾ ಸೌಲಭ್ಯ ಹಾಗೂ ಅಧಿಕಾರ ಕೂಡ ಸಿಗಲಿದೆ.
Laxmi News 24×7