Breaking News

ರಾಜ್ಯದ ಯಾವ್ಯಾವ ಕಡೆ ಎಷ್ಟಿದೆ ಪೆಟ್ರೋಲ್, ಡೀಸೆಲ್ ಬೆಲೆ

Spread the love

ಬೆಂಗಳೂರು, ಆಗಸ್ಟ್‌ 07: ದೇಶದಲ್ಲಿ ಸತತ 20 ದಿನಗಳಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿದ್ದು, ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಆಗಸ್ಟ್ 7ರಂದು ಕೂಡ ಇಂಧನ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ.

ಜುಲೈ ತಿಂಗಳಿನಲ್ಲಿ ಪೆಟ್ರೋಲ್, ಡೀಸೆಲ್‌ ಬೆಲೆಯಲ್ಲಿ ಏರಿಳಿತ ಕಂಡುಬಂದಿತ್ತು. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿತ್ತು.

 

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ, ಲೀಟರ್‌ ಪೆಟ್ರೋಲ್‌ಗೆ 107.83 ರೂ, ಡೀಸೆಲ್ 97.45ರೂ ಆಗಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಮುಂದೆ ಓದಿ…

ರಾಜ್ಯಾದ್ಯಂತ 100 ರೂ ಗಡಿ ದಾಟಿದ ಪೆಟ್ರೋಲ್ ಬೆಲೆ

ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ದರ 100ರೂ ಗಡಿ ದಾಟಿದೆ. ಪೆಟ್ರೋಲ್ 104 ರೂ ಕನಿಷ್ಠ 107 ರೂ ಗರಿಷ್ಠ ದಾಖಲಾಗಿದೆ. ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 105.25 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 95.26 ರೂಪಾಯಿಗೆ ಮುಟ್ಟಿದೆ. ಬಳ್ಳಾರಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 107 ರೂ ದಾಟಿದ್ದು, ಬಳ್ಳಾರಿಯಲ್ಲಿ ಲೀಟರ್ ಪೆಟ್ರೋಲ್ಗೆ 107.12 ರೂ ಇದ್ದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ 107.46 ರೂ ಇದೆ. ಹಲವು ಜಿಲ್ಲೆಗಳಲ್ಲಿ 106 ರೂ ದಾಟಿದೆ.

ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಆಗಸ್ಟ್ 07) ಸಚಿತ್ರ ಮಾಹಿತಿ ಇಲ್ಲಿದೆ. (ಚಿತ್ರ ವಿನ್ಯಾಸ: ಭರತ್ ಎಚ್. ಸಿ.)

 

ಇಂಧನದ ಮೇಲೆ ಹೆಚ್ಚಿನ ಅಬಕಾರಿ ಸುಂಕ

ಭಾರತ ಸರ್ಕಾರ ಕೂಡ ಅಧಿಕ ಅಬಕಾರಿ ಸುಂಕ ವಿಧಿಸುತ್ತಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ದೇಶದಲ್ಲಿ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32.98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 75 ಡಾಲರ್ ಆಗಿದೆ.

 

ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 70.91 ಯುಎಸ್ ಡಾಲರ್ (1 USD=74.20ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.49 ರೂ ನಷ್ಟಿದೆ, ಡೀಸೆಲ್ ಬೆಲೆ 102.95 ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರೂ ಗಡಿ ದಾಟಿದೆ.

ಇಂಧನ ದರ ಏರಿಳಿತ ಹೇಗೆ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ