ಬೆಂಗಳೂರು: ಕೋವಿಡ್ ಮೂರನೇ ಅಲೆ ಆತಂಕ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯೋತ್ಸವನ್ನ ಈ ಬಾರಿ ಸರಳವಾಗಿ ಆಚರಿಸಲು ಬಿಬಿಎಂಪಿ ನಿರ್ಧರಿಸಿದೆ.
ಅದರಂತೆ ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗಳ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸಭೆ ಕರೆದಿದ್ದಾರೆ. ಇಂದು ಬೆಳಗ್ಗೆ 11ಕ್ಕೆ ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗಳ ಬಗ್ಗೆ ಸಭೆ ನಡೆಯಲಿದೆ. ಸಭೆಯಲ್ಲಿ ವಲಯವಾರು ಬಿಬಿಎಂಪಿ ಅಧಿಕಾರಿಗಳು, ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಸೋಂಕು ಹರಡದಂತೆ ಸರಳವಾಗಿ ಯಾವ ರೀತಿ ಆಚರಿಸಬೇಕು. ಜನ ಗುಂಪು ಸೇರದಂತೆ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸದಂತೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಅನ್ನೋದ್ರ ಬಗ್ಗೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ.
Laxmi News 24×7