Breaking News

ಮದ್ವೆಯಾದ 23 ದಿನಕ್ಕೇ ನವದಂಪತಿ ದುರಂತ ಸಾವು! ಅತ್ತಿಗೆಯ ಪ್ರಾಣವೂ ಹೋಯ್ತು.

Spread the love

ಬಾಗಲಕೋಟೆ: ಮದುವೆ ಸಂಭ್ರಮದಲ್ಲಿದ್ದ ಕುಟುಂಬದ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದು, ನವ ದಂಪತಿ ಮತ್ತು ಅತ್ತಿಗೆ ಮೂವರೂ ದುರಂತ ಅಂತ್ಯ ಕಂಡಿದ್ದಾರೆ. ಮದುವೆ ಮನೆಯಲ್ಲೀಗ ಸೂತಕ ಆವರಿಸಿದ್ದು, ಮೂವರ ಸಾವಿನ ಸುದ್ದಿ ಕೇಳಿದ ಸಂಬಂಧಿಕರು, ಗ್ರಾಮಸ್ಥರು, ‘ಅಯ್ಯೋ ದೇವರೇ, ನೀನೆಂಥಾ ಕ್ರೂರಿ?’ ಎಂದು ಹಿಡಿಶಾಪ ಹಾಕುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸದ್ದಾಂ ರಾಜೇಸಾಬ ಸೊನ್ನದ ಜಾತಗಾರ(27) ಮತ್ತು ಇವರ ಪತ್ನಿ ಸಲೀಮಾ ಸದ್ದಾಂ(25) ಹಾಗೂ ಸದ್ದಾಂ ಅವರ ಅಣ್ಣನ ಪತ್ನಿ ರೇಷ್ಮಾ ಇಸ್ಮಾಯಿಲ್ (26) ಮೃತ ದುರ್ದೈವಿಗಳು. ಕಳೆದ ಜುಲೈ 15ರಂದು ಸದ್ದಾಂ ಮತ್ತು ಸಲೀಮಾ ಮದುವೆ ನಡೆದಿತ್ತು. ಇದಾದ ಬಳಿಕ ಸಂಬಂಧಿಕರ ಮದುವೆಗೆಂದು ಜಾತಗಾರ ಕುಟುಂಬದ ಇಬ್ಬರು ಮಕ್ಕಳು ಸೇರಿ 7 ಮಂದಿ ಆಂಧ್ರದ ಕಡಪಗೆ ಕಾರಿನಲ್ಲಿ ಹೋಗಿದ್ದರು.

ಇಂದು(ಶನಿವಾರ) ಜಾತಗಾರ ಕುಟುಂಬ ಕಾರಿನಲ್ಲಿ ವಾಪಸ್​ ಮುಧೋಳಕ್ಕೆ ಬರುವ ಮಾರ್ಗಮಧ್ಯೆ ಆಂಧ್ರದ ನೆಲ್ಲೂರು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನವದಂಪತಿ ಸದ್ದಾಂ-ಸಲೀಮಾ, ಅತ್ತಿಗೆ ರೇಷ್ಮಾ ಮೂವರು ಮೃತಪಟ್ಟಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೂವರು ಸಾವವಿಂದ ಕಂಗೆಟ್ಟ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.


Spread the love

About Laxminews 24x7

Check Also

ಬಾಗಲಕೋಟೆ ನೂತನ ಡಿಸಿಯಾಗಿ ಸಂಗಪ್ಪ ಎಂ. ಅಧಿಕಾರ ಸ್ವೀಕಾರ

Spread the love ಬಾಗಲಕೋಟೆ ನೂತನ ಡಿಸಿಯಾಗಿ ಸಂಗಪ್ಪ ಎಂ. ಅಧಿಕಾರ ಸ್ವೀಕಾರ ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಂಗಪ್ಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ