Breaking News

ಫ್ಲೈ ಓವರ್‌ನಿಂದ ನೆಲಕ್ಕೆ ಉರುಳಿದ ಕ್ಯಾಂಟರ್ : ಡ್ರೈವರ್ ಮತ್ತು ಕ್ಲಿನರ್ ಪ್ರಾಣಾಪಾಯದಿಂದ ಪಾರು MORNING TOP NEWS

Spread the love

ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಮೋಟ ಸಾಗಣೆ ಮಾಡುತ್ತ ಲಾರಿ ಪಲ್ಟಿ ಹೊಡೆದ ಘಟನೆ ಗುಡಿಬಂಡೆಯಲ್ಲಿ ನಡೆದಿದೆ. ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಕಮ್ ದೂರ್ ನಿಂದ ಕೋಲಾರಕ್ಕೆ ಹೊರಟಿದ್ದ ಟೊಮೆಟೊ ಹೊತ್ತ ಐಚರ್ ಕ್ಯಾಂಟರ್ ನಿಯಂತ್ರಣ ತಪ್ಪಿ‌ ಮೇಲ್ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಸುಮಾರು 10 ಅಡಿಯಿಂದ ಸರ್ವಿಸ್ ರಸ್ತೆಯ ಕೆಳಗೆ ಬಿದ್ದಿದೆ.ಅದೃಷ್ಟವಶ್ ಚಾಲಕ ಮತ್ತು ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 7ರ ಬೀಚಗಾನಹಳ್ಳಿ ಕ್ರಾಸ್ ನಲ್ಲಿ ಘಟನೆ ನಡೆದಿದ್ದು,
ಸರ್ವೀಸ್ ರಸ್ತೆಯಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ.

ಹೀಗಾಗಿ ಮೇಲುರಸ್ತೆ ಮೇಲಿಂದ ಕೆಳಗೆ ಲಾರಿ ಬಿದ್ದರೂ ಹೆಚ್ಚಿನ ಅನಾಹುತ ಆಗಿಲ್ಲ. ಚಾಲಕ ಇಬ್ರಾಹಿಂ ಮತ್ತು ಕ್ಲೀನರ್ ನೂರುಲ್ಲ ಎಂಬುವರಿಗೆ ಕೈ, ಕಾಲು ಹಾಗೂ ತಲೆ, ಮೂಗಿಗೆ ಗಾಯಗಳಾಗಿದ್ದು, ಅಂಬುಲೆನ್ಸ್ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಆಸ್ಪತ್ರೆಗೆ ಕಳುಹಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿದ ಗುಡಿಬಂಡೆ ಪೊಲೀಸರು ಪರೀಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ