ಗೋಕಾಕ: ರಾಜ್ಯ ಸರ್ಕಾರದ ಬಿಜೆಪಿ ನಾಯಕರಿಂದ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರವಾಗಿ ನೀಡಿರುವ ಹೇಳಿಕೆ ಕುರಿತಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಬದಲಾವಣೆ ಮಾಡಲು ಪ್ರಯತ್ನಿಸಿದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು, ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ ಜೀವನ ಮುಡಿಪಾಗಿಟ್ಟವರು, ಆ ಉದ್ದೇಶದಿಂದಲೇ ಇಂದಿರಾ ಕ್ಯಾಂಟಿನ್ ಎಂದು ಹೆಸರನ್ನು ಇಡಲಾಗಿದೆ. ಬಿಜೆಪಿ ನಾಯಕರ ಈ ನಿರ್ಧಾರ ಸರಿಯಲ್ಲ. ತಪ್ಪು ತೀರ್ಮಾನದಿಂದ ಹಿಂದೆ ಸರಿಯಬೇಕು ಎಂದರು.
ಈಗಾಗಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ನಾಯಕರು ಎಲ್ಲರೂ ಮಾತನಾಡಿದ್ದೇವೆ. ವಿರೋಧದ ನಡುವೆಯೂ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ಮುಂದಾದರೇ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ಮಾಡಲಿದ್ದೇವೆ ಎನ್ನುವ ಮೂಲಕ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
Laxmi News 24×7