Breaking News

ಕಿಸಾನ್ ಸಮ್ಮಾನ್ ಕಂತು ಇಂದು ಜಮಾ

Spread the love

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಮುಂದಿನ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 9ರಂದು ಬಿಡುಗಡೆ ಮಾಡಲಿದ್ದಾರೆ. ಸೋಮವಾರ ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಬಿಡುಗಡೆ ಕಾರ್ಯ ನೆರವೇರಿಸಲಿದ್ದಾರೆ.

9.75 ಕೋಟಿಗೂ ಅಧಿಕ ರೈತ ಕುಟುಂಬಗಳಿಗೆ 19,500 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವರ್ಗಾಯಿಸಿ, ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ವಾರ್ಷಿಕ 6000 ರೂಪಾಯಿ ನೆರವು ನೀಡುವ ಈ ಯೋಜನೆಯನ್ವಯ ಅರ್ಹ ಫಲಾನುಭವಿ ಕುಟುಂಬದ ಬ್ಯಾಂಕ್ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಹಣವನ್ನು ನೇರವಾಗಿ ವರ್ಗಾಯಿಸಲಾಗುತ್ತದೆ. ಇದುವರೆಗೆ 1.38 ಲಕ್ಷ ಕೋಟಿ ರೂಪಾಯಿಗಳನ್ನು ರೈತರಿಗೆ ವಿತರಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ