Breaking News

ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ

Spread the love

ಮೈಸೂರು : ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಸೋಮವಾರ, ಆಗಸ್ಟ್ 9) ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪೂರ್ಣ ಕುಂಭ ಸ್ವಾಗತ ಮಾಡಲಾಯಿತು. ತದನಂತರ ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರಿನಲ್ಲಿಂದು ಸಿಎಂ ಪ್ರವಾಸ :

ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಚಿವರುಗಳಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಡಾ. ಕೆ. ಸುಧಾಕರ್, ನಾರಾಯಣಗೌಡ, ಮುನಿರತ್ನ, ಗೋಪಾಲಯ್ಯ ಸಾಥ್ ನೀಡಿದ್ದರು.

ಮುಖ್ಯಮಂತ್ರಿ ಹಾಗೂ ಅವರ ಟೀಮ್ ದೇವಿಯ ಆಶೀರ್ವಾದ ಪಡೆದ ಬಳಿಕ ಕೋವಿಡ್ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಆ ಬಳಿಕ ಮುಖ್ಯಮಂತ್ರಿಗಳು ಸಚಿವರುಗಳೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಬೈಕ್​ ಡಿಕ್ಕಿ ಹೊಡೆದ ಪರಿಣಾಮ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ.

Spread the loveಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ