Home / ಜಿಲ್ಲೆ / ಬೆಂಗಳೂರು / ಕಿಸಾನ್ ಸಮ್ಮಾನ್ ಯೋಜನೆಯಡಿ 51. 19 ಲಕ್ಷ ರೈತರಿಗೆ ₹ 1,023 ಕೋಟಿ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ : ಬಿ.ಸಿ. ಪಾಟೀಲ್

ಕಿಸಾನ್ ಸಮ್ಮಾನ್ ಯೋಜನೆಯಡಿ 51. 19 ಲಕ್ಷ ರೈತರಿಗೆ ₹ 1,023 ಕೋಟಿ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ : ಬಿ.ಸಿ. ಪಾಟೀಲ್

Spread the love

ಬೆಂಗಳೂರು: ಕಿಸಾನ್ ಸಮ್ಮಾನ್ ಯೋಜನೆಯಡಿ ಎರಡನೇ ಕಂತಿಯಲ್ಲಿ ರಾಜ್ಯದ 51. 19 ಲಕ್ಷ ರೈತರಿಗೆ ₹ 1,023 ಕೋಟಿ ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಫೆಬ್ರವರಿ 1, 2019ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ ₹ 6 ಸಾವಿರ ಆರ್ಥಿಕ ನೆರವನ್ನು ನೀಡುತ್ತಿದೆ.

ಈ ಅನುದಾನವನ್ನು 2 ಸಾವಿರ ರೂ. ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ. ಇಲ್ಲಿಯವರಿಗೆ 55.06 ಲಕ್ಷ ರೈತ ಕುಟುಂಬಗಳು 1ನೇ ಕಂತು ಪಡೆಯುವ ಮೂಲಕ ಯೋಜನೆಯ ಲಾಭವನ್ನು ಪಡೆದಿದ್ದಾರೆ. 2019ರ ಮಾರ್ಚ್ ನಿಂದ ಜುಲೈ 2021ರವರೆಗೆ ಕೇಂದ್ರ ಸರ್ಕಾರದಿಂದ ಒಟ್ಟು ₹ 6940.07 ಕೋಟಿ ಗಳ ಆರ್ಥಿಕ ನೆರವನ್ನು ನೀಡಲಾಗಿದೆ ಎಂದು ಅವರು ಪಾಟೀಲ್ ಮಾಹಿತಿ ನೀಡಿದ್ದಾರೆ.

ಪ್ರಸಕ್ತ ವರ್ಷದ ಎರಡನೇ ಕಂತಿನಲ್ಲಿ 51.19 ಲಕ್ಷ ರೈತರಿಗೆ 1023 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅನುಮೋದಿಸಲ್ಪಟ್ಟ ರೈತರಿಗೆ ಎರಡು ಕಂತುಗಳಲ್ಲಿ ವರ್ಷಕ್ಕೆ 4 ಸಾವಿರ ರೂ.ನಂತೆ ಆರ್ಥಿಕ ನೆರವು ವರ್ಗಾವಣೆಗೆ ಆದೇಶ ಹೊರಡಿಸಲಾಗಿದ್ದು, ಇಲ್ಲಿಯವರೆಗೆ 2849.16 ಕೋಟಿ ರೂ. ಗಳ ಆರ್ಥಿಕ ಸಹಾಯಧವನ್ನು ನೀಡಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ