Breaking News

ಶೂಟಿಂಗ್‌ ವೇಳೆ ವಿದ್ಯುತ್‌ ಸ್ಪರ್ಶ ; ಸಾಹಸ ಕಲಾವಿದನ ಸಾವು

Spread the love

ರಾಮನಗರ: ತಾಲ್ಲೂಕಿನ ಜೋಗನದೊಡ್ಡಿ ಬಳಿ ʻಲವ್‌ ಯೂ ರಚ್ಚುʼ ಸಿನಿಮಾ ಶೂಟಿಂಗ್‌ ವೇಳೆ ಫೈಟರ್‌ವೊಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರ ನಡೆದಿದೆ.

ಮೃತರನ್ನು ತಮಿಳುನಾಡು ಮೂಲದ ವಿವೇಕ್‌ ಎಂದು ಗುರುತಿಸಲಾಗಿದೆ. ಸಾಹಸ ದೃಶ್ಯ ಚಿತ್ರೀಕರಣ ವೇಳೆ ಫೈಟರ್​ ವಿವೇಕ್‌ಗೆ​ ವಿದ್ಯುತ್​ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ವಿದ್ಯುತ್‌ ತಂತಿಗೆ ರೋಪ್‌ ಸ್ಪರ್ಷಿಸಿದ್ದೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ.

ರಚಿತಾ ರಾಮ್ ಚಿತ್ರದ ನಾಯಕಿ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗುರು ದೇಶಪಾಂಡೆ ಚಿತ್ರದ ನಿರ್ಮಾಪಕ. ಮಣಿಕಾಂತ್​ ಕದ್ರಿ ಅವರು ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ