Breaking News
Home / ರಾಜಕೀಯ / ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮರೆತ ಸರಕಾರ!

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮರೆತ ಸರಕಾರ!

Spread the love

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಸಂದಿರುವ ಈ ಸಂದರ್ಭ ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಅದರಂತೆ ಎಲ್ಲ ರಾಜ್ಯ ಸರಕಾರಗಳಿಗೆ ಕಾರ್ಯಕ್ರಮಗಳನ್ನು ರೂಪಿಸಲು ಸೂಚಿಸಿದೆ. ಆದರೆ, ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಯಾವುದೇ ಯೋಜನೆ ರೂಪಿಸಿಕೊಳ್ಳಲು ಮುಂದಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಅಮೃತ ಮಹೋತ್ಸವ ಆಚರಣೆ ಸಂಬಂಧ ಸಚಿವ ಸಂಪುಟದ ಉಪ ಸಮಿತಿ ರಚನೆ, ವರ್ಷ ಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕಾರ್ಯಕ್ರಮಗಳ ರೂಪುರೇಷೆ ಹಾಕಿಕೊಳ್ಳಲು ತಜ್ಞರ ಸಮಿತಿ ರಚನೆ ಸೇರಿದಂತೆ ರಾಜ್ಯ ಸರಕಾರ ಇದುವರೆಗೂ ಯಾವುದೇ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ.

ಈ ಕುರಿತು ಅಖಿಲ ಭಾರತ ಸ್ವಾತಂತ್ರ್ಯ ಹೋರಾಟಗಾರರ ಸಮಿತಿಯ ಯುವ ಘಟಕದ ವತಿಯಿಂದ ಸಿಎಂ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಹೋರಾಟಗಳು, ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರ ಜೀವನ ಚರಿತ್ರೆ ಕುರಿತು ಬೆಳಕು ಚೆಲ್ಲುವ ಕಾರ್ಯಕ್ರಮಗಳನ್ನು ವರ್ಷ ಪೂರ್ತಿ ಆಯೋಜನೆ ಮಾಡಿ, ಈಗಿನ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ತಿಳಿಸುವ ಪ್ರಯತ್ನ ಮಾಡಬೇಕಿದೆ. ಆದರೆ, ಇದುವರೆಗೂ ರಾಜ್ಯ ಸರಕಾರ ಯಾವುದೇ ರೀತಿಯ ಸಿದ್ದತೆ ಮಾಡಿಕೊಂಡಿಲ್ಲ ಎಂದು ತಿಳಿದುಬಂದಿದೆ.

ಡಿಪಿಎಆರ್‌ (ಆಡಳಿತ ಸುಧಾರಣೆ ಮತ್ತು ರಾಜಕೀಯ ವಿಶ್ರಾಂತಿ ವೇತನ) ಇಲಾಖೆಯ ಕಾರ್ಯದರ್ಶಿ ಅವರು ಈ ಕಾರ್ಯಕ್ರಮ ಸಿದ್ಧತೆ ಮತ್ತು ಆಯೋಜನೆ ಮಾಡುವ ಜವಾಬ್ದಾರಿ ನೋಡಿಕೊಳ್ಳಬೇಕಿದೆ.

ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜನೆ ಮಾಡುವ ತೀರ್ಮಾನ ಸರಕಾರದ ಮಟ್ಟದಲ್ಲಿ ಆಗಬೇಕಿದೆ. ಅನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.-ಮನೀಶ್‌ ಮೌದ್ಗಿಲ್‌, ಡಿಪಿಎಆರ್‌ ಕಾರ್ಯದರ್ಶಿ

ಕೇಂದ್ರ ಹಾಗೂ ಬೇರೆ ರಾಜ್ಯಗಳಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯ ಕ್ರಮವನ್ನು ವರ್ಷ ಪೂರ್ತಿ ಆಚರಣೆ ಮಾಡಲು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ, ರಾಜ್ಯದಲ್ಲಿ ಯಾವುದೇ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳದೆ, ಸ್ವಾತಂತ್ರ್ಯ ಯೋಧರು ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಅವಮಾನ ಮಾಡಲಾಗುತ್ತಿದೆ.-ಬಿ. ಎಂ. ಚಿಕ್ಕನಗೌಡರ, ಅ. ಭಾ. ಸ್ವಾತಂತ್ರ್ಯ ಹೋರಾಟಗಾರರ ಸಮಿತಿ ಯುವ ಘಟಕದ ರಾಜ್ಯಾಧ್ಯಕ್ಷರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ