Breaking News

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಪಟ್ಟಿ ಬಿಡುಗಡೆ

Spread the love

ಮೈಸೂರು: ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಪಟ್ಟಿಯನ್ನು ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್‌ ಮುಖಂಡ ಎನ್.ಎಂ.ನವೀನ್‌ ಕುಮಾರ್‌ ಬಿಡುಗಡೆ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಅಭಿವೃದ್ಧಿ ಕಾರ್ಯಗಳ ಪಟ್ಟಿ ಬಿಡುಗಡೆ ಮಾಡಲಾಯಿತು.
ಈ ವೇಳೆ ನವೀನ್‌ ಕುಮಾರ್‌ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕದಲ್ಲಿ ನಡೆದಂತಹ ಅಭಿವೃದ್ಧಿ ಪರ್ವ ನ ಭೂತೋ ನ ಭವಿಷ್ಯತಿ ಎಂಬಂತಿದೆ ಎಂದು ಸ್ಮರಿಸಿದರು.

ಬಿಜೆಪಿ ಸರ್ಕಾರದವರು ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ, ಮುಂದೆಯೂ ಮಾಡಲಾರರು. ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ರೆಸಾರ್ಟ್ ರಾಜಕೀಯ, ಮಂತ್ರಿಗಿರಿಗಾಗಿ ಲಾಬಿ, ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ಮೊದಲಾದ ವಿದ್ಯಮಾನಗಳಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಅವರು 5 ವರ್ಷ ನಿರಂತರವಾಗಿ ತಮ್ಮ ಸಂಪೂರ್ಣ ಅಧಿಕಾರವಧಿಯನ್ನು ಕರ್ನಾಟಕದ ಅಭಿವೃದ್ಧಿಗಾಗಿ ಮತ್ತು ಬಡಜನರ ಸೇವೆಗಾಗಿ ಮೀಸಲಿಟ್ಟಿದ್ದರು ಎಂದು ನೆನೆದರು.

ಸಮಾರಂಭದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್‌ನ ಕಾರ್ಯದರ್ಶಿ ರೇಖಾ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಎಂ.ರಾಜೇಶ್, ದೇವರಾಜ್ ಅರಸು ಬ್ಲಾಕ್‌ನ ಅಧ್ಯಕ್ಷ ಪೈಲ್ವಾನ್ ಸುನಿಲ್, ಬಿಂದು ಗೌಡ, ತಗಡೂರು ಬ್ಲಾಕ್‌ನ ಯುವ ಕಾಂಗ್ರೆಸ್ ಅಧ್ಯಕ್ಷ ಗಿರೀಶ್, ಅಶೋಕಪುರಂನ ಪೈಲ್ವಾನ್ ಸುರೇಶ್ ಮತ್ತಿತರರು ಹಾಜರಿದ್ದರು.


Spread the love

About Laxminews 24x7

Check Also

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!

Spread the love ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!! ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ