Home / ಜಿಲ್ಲೆ / ಬೆಂಗಳೂರು / ಅಪರಾಧ ವೈರಸ್ ಇದ್ದ ಹಾಗೆ, ಸದೆಬಡಿಯಬೇಕು: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಅಪರಾಧ ವೈರಸ್ ಇದ್ದ ಹಾಗೆ, ಸದೆಬಡಿಯಬೇಕು: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

Spread the love

ಬೆಂಗಳೂರು, ಆ.10: ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಅಪರಾಧ ವೈರಸ್ ಇದ್ದ ಹಾಗೆ. ಇದನ್ನು ಸಶಕ್ತವಾಗಿ ಸದೆಬಡಿಯಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಅವರು ಇಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು. ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಪರಾಧವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕಾನೂನು, ಸುವ್ಯವಸ್ಥೆ ಕಾಪಾಸುವುದು ಸರ್ಕಾರದ ಪ್ರಥಮ ಆದ್ಯತೆ ಎಂದು ಮುಖ್ಯಮಂತ್ರಿ ನುಡಿದರು.

ಕೋವಿಡ್ 19 ಸಂಭಾವ್ಯ ಮೂರನೇ ಅಲೆ ತಡೆಗಟ್ಟಲು ಕ್ರಮ ವಹಿಸಬೇಕು. ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಹಿರಿಯ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗಡಿ ಚೆಕ್ ಪೋಸ್ಟ್ ಗಳ ತಪಾಸಣೆ ನಡೆಸಬೇಕು ಎಂದು ಸೂಚಿಸಿದ ಸಿಎಂ, ಭೂವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು ಎಂದರು.

ಮಾದಕ ವಸ್ತುಗಳ ವಿರುದ್ಧದ ಹೋರಾಟ ಮುಂದುವರಿಯಲಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದ ಮುಖ್ಯಮಂತ್ರಿ, ಆಂತರಿಕ ಭದ್ರತಾ ವಿಭಾಗವನ್ನು ಬಲಪಡಿಸಬೇಕು ಎಂದು ಸೂಚಿಸಿದರು.

ಕೈದಿಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ವ್ಯವಸ್ಥೆ ಜನಸ್ನೇಹಿಯಾಗಬೇಕು ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಇಲಾಖೆಯ ಸುಧಾರಣೆ ಮತ್ತು ಅತ್ಯುತ್ತಮ ಕಾರ್ಯ ನಿರ್ವಹಣೆಗೆ ಬೆಂಬಲ ನೀಡುವಂತೆ ಮುಖ್ಯಮಂತ್ರಿಯನ್ನು ಕೋರಿದರು.

ಇಲಾಖೆಯು ಅಪರಾಧ ಪ್ರಕರಣಗಳ ಶೀಘ್ರ ತನಿಖೆಗೆ ಆದ್ಯತೆ ನೀಡಬೇಕು. ಇದರಲ್ಲಿ ವಿಳಂಬ ಧೋರಣೆ ಸಲ್ಲದು ಎಂದು ತಿಳಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ