Breaking News

ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ ಬಿ.ಸಿ.ಪಾಟೀಲ್ ಮನವಿ

Spread the love

ನವದೆಹಲಿ/ಬೆಂಗಳೂರು: ಕೃಷಿ ಸಚಿವಬಿ.ಸಿ.ಪಾಟೀಲ್ ನವದೆಹಲಿಯಲ್ಲಿ ಮಂಗಳವಾರ ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರದ ರಾಜ್ಯ ರಾಸಾಯನಿಕ ಸಚಿವ ಭಗವಂತ್ ಖೂಬಾ ಅವರನ್ನು ಭೇಟಿ ಮಾಡಿ, ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆ ಮೀರಿ ಸುಮಾರು 77 ಲಕ್ಷ ಹೆಕ್ಟೇರ್ ದಾಖಲೆಯ ಪ್ರಮಾಣದಷ್ಟು ಬಿತ್ತನೆ ಆಗಿತ್ತು. ಈ ಬಾರಿಯೂ ಕೂಡ ಬೇಗನೇ ಬಿತ್ತನೆಯಾಗಿದ್ದು,ಕೃಷಿ ಚಟುವಟಿಕೆ ಚುರುಕು ಪಡೆದಿದೆ. ಆದ್ದರಿಂದ ಫಸಲು ಬರಲು ಯಾವುದೇ ರೀತಿಯ ಕೊರತೆಯಾಗದಂತೆ ಯೂರಿಯಾ ಸೇರಿದಂತೆ ಇತರೆ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ಮೇರೆಗೆ ಪೂರೈಸುವಂತೆ ಕೇಂದ್ರ ರಾಸಾಯನಿಕ ಸಚಿವರಿಗೆ ಮನವಿ ಮಾಡಿದರು.

ಪ್ರಸಕ್ತ ವರ್ಷದಲ್ಲಿ, ಬಿತ್ತನೆಯ ಪ್ರದೇಶದಲ್ಲಿ ದಾಖಲೆಯ ಹೆಚ್ಚಳ ಮತ್ತು ಸಾಮಾನ್ಯ ಮಳೆಗಿಂತ ಅಧಿಕ ಮಳೆಯಿಂದಾಗಿ, ರಾಜ್ಯಗಳ ಯೂರಿಯಾದ ಅವಶ್ಯಕತೆಯೂ ಅನುಗುಣವಾಗಿ ಹೆಚ್ಚಾಗಿದೆ. ರಾಜ್ಯದಲ್ಲಿ ಸದ್ಯ 0.32 ಲಕ್ಷ ಟನ್ ಯೂರಿಯ ಬಫರ್ ಸ್ಟಾಕ್ ಇದೆ. ಈ ವರ್ಷದಲ್ಲಿ ಆಗಸ್ಟ್ 7ರವರೆಗೆ ಯೂರಿಯಾ ಪೂರೈಕೆಯು 6.18 ಲಕ್ಷ ಮೆಟ್ರಿಕ್ ಟನ್ ಆಗಿದೆ. ಈ ಬಾರಿಯೂ ಸಹ ಯಾವುದೇ ರೀತಿಯ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಅಲ್ಲದೇ ಕರ್ನಾಟಕ ರಾಜ್ಯದಲ್ಲಿ ಎಣ್ಣೆಕಾಳು ಬೆಳೆಗಳಿಗೆ ಉತ್ತೇಜನ ಮಾಡಲು ಹೆಚ್ಚಿನ ಕಾರ್ಯಕ್ರಮಗಳನ್ನು ನೀಡಬೇಕು. ಹಾಗೂ ಕೃಷಿ ಉತ್ಪನ್ನಗಳ ಹೆಚ್ಚಳಕ್ಕೆ ಹೆಚ್ಚು ಉತ್ತೇಜನ ನೀಡಬೇಕೆಂದು ಬಿ.ಸಿ.ಪಾಟೀಲ್ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ ಕತ್ರಿ, ಅಪರ ಕೃಷಿ ನಿರ್ದೇಶಕರು (ಸಾವಯವ ಕೃಷಿ )ವೆಂಟಕರಮಣರೆಡ್ಡಿ ಜೊತೆಗಿದ್ದರು.


Spread the love

About Laxminews 24x7

Check Also

ಒಂದು ಸಾವಿರ ಪಿಎಸ್ಐ ಹುದ್ದೆ ಖಾಲಿ, ಶೀಘ್ರವೇ ನೇಮಕಾತಿ: ಸಚಿವ ಪರಮೇಶ್ವರ್

Spread the loveಕೊಪ್ಪಳ: ಪಿಎಸ್ಐ ನೇಮಕಾತಿ ಹಗರಣದ ಬಳಿಕ ಐದು ವರ್ಷಗಳ ಕಾಲ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ. ಒಂದು ಸಾವಿರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ