ನವದೆಹಲಿ: ನಿತ್ಯ ಸಂಚರಿಸುವ ಯಾವುದೇ ರೈಲುಗಳನ್ನು ನಿಲ್ಲಿಸಲಾಗಿಲ್ಲ ಎಂದು ರೈಲ್ವೇ ಸಚಿವಾಲಯ ಸ್ಪಷ್ಟಪಡಿಸಿದೆ.ಈ ಕುರಿತು ಟ್ವೀಟ್ ಮಾಡುವ ಮೂಲಕ ತಿಳಿಸಿರುವ ಸಚಿವಾಲಯ, ಕೆಲ ಮಾಧ್ಯಮಗಳಲ್ಲಿ ಸೆಪ್ಟೆಂಬರ್ 30ರ ವರೆಗೆ ನಿತ್ಯ ಸಂಚರಿಸುವ ಎಲ್ಲ ರೈಲುಗಳನ್ನು ಸಚಿವಾಲಯ ರದ್ದು ಮಾಡಿದೆ ಎಂದು ವರದಿಯಾಗಿದೆ. ಈ ವರದಿ ಸರಿಯಲ್ಲ. ಸಚಿವಾಲಯ ಯಾವುದೇ ಹೊಸ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತ ನೋಟಿಫಿಕೇಶನ್ ಹರಿದಾಡುತ್ತಿದ್ದು, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಎಲ್ಲ ಎಕ್ಸ್‍ಪ್ರೆಸ್ ರೈಲುಗಳ ಸೇವೆಯನ್ನು ಸೆಪ್ಟೆಂಬರ್ 30ರ ವರೆಗೆ ರದ್ದುಗೊಳಿಸಲಾಗಿದೆ ಎಂದು ಇದರಲ್ಲಿ ತಿಳಿಸಲಾಗಿದೆ. ಅಗಸ್ಟ್ 10ರ ದಿನಾಂಕವಿರುವ ಈ ಸುತ್ತೋಲೆಯಲ್ಲಿ ರೈಲುಗಳು ಸಂಚಾರ ರದ್ದತಿ ಮುಂದುವರಿಯಲಿದ್ದು, ಎಕ್ಸ್‍ಪ್ರೆಸ್ ರೈಲುಗಳ ಸಂಚಾರ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ. ಹೀಗಾಗಿ ರೈಲು ಸಂಚಾರ ರದ್ದು ಹಾಗೂ ಪ್ರಾರಂಭದ ಕುರಿತು ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.