Breaking News
Home / ರಾಜಕೀಯ / ಮುಖ್ಯಮಂತ್ರಿ ಪದವಿ ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ನಿತ್ಯ ಕೆಟ್ಟ ಕನಸು ಬೀಳುತ್ತಿವೆ.: ಈಶ್ವರಪ್ಪ

ಮುಖ್ಯಮಂತ್ರಿ ಪದವಿ ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ನಿತ್ಯ ಕೆಟ್ಟ ಕನಸು ಬೀಳುತ್ತಿವೆ.: ಈಶ್ವರಪ್ಪ

Spread the love

 : ಮುಖ್ಯಮಂತ್ರಿ ಪದವಿ ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ನಿತ್ಯ ಕೆಟ್ಟ ಕನಸು ಬೀಳುತ್ತಿವೆ. ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂಬ ಕೆಟ್ಟ ಕನಸು ಬೀಳುತ್ತಿವೆ. ಆದರೆ ಈ ಕನಸು ನನಸಾಗಲು ಸಾಧ್ಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದರು.

ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸರಿಯಾಗಿ ಆಡಳಿತ ಮಾಡಿದ್ದರೆ ಮತ್ತೆ ಅಧಿಕಾರಕ್ಕೆ ಅವರೇ ಬರುತ್ತಿದ್ದರು. ಈಗ ಚುನಾವಣೆಗೆ ಎರಡು ವರ್ಷ ಮೊದಲೇ ನಾನೇ ಮುಂದಿನ ಸಿಎಂ ಭ್ರಮೆಯಲ್ಲಿದ್ದಾರೆ ಎಂದರು. ಸಿದ್ದರಾಮಯ್ಯ ಅಷ್ಟೇ ಅಲ್ಲ ಡಿಕೆಶಿ, ಪರಮೇಶ್ವರ, ಎಂ.ಬಿ. ಪಾಟೀಲ್ ಸೇರಿ ಎಲ್ಲರೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ್ದರು. ಇವರೆಲ್ಲರ ಕೆಟ್ಟ ಕನಸು ಎಂದಿಗೂ ನನಸಾಗುವದಿಲ್ಲ. ಈ ಜನ್ಮದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಕುಟುಕಿದರು.

ಕಾಂಗ್ರೆಸ್ ನ ಬಿ ಕೆ ಹರಿಪ್ರಸಾದ ಹಾಗೂ ನನ್ನ ನಡುವೆ ಯಾವುದೇ ವಯಕ್ತಿಕ ದ್ವೇಷವಿಲ್ಲ. ಹರಿಪ್ರಸಾದ ಮಾತನಾಡಿದ್ದು ತಪ್ಪು ಎಂದು ಕಾಂಗ್ರೆಸ್ ದವರು ಹೇಳಬೇಕಿತ್ತು. ಅವರಿಂದ ಕ್ಷಮೆ ಕೇಳಿಸಬೇಕಿತ್ತು ಎಂದು ಈಶ್ವರಪ್ಪ ತಮ್ಮ ವಿರುದ್ಧ ಹರಿಹಾಯುತ್ತಿರುವ ಕಾಂಗ್ರೆಸ್ ಗೆ ತಿರುಗೇಟು ನೀಡಿದರು.

ಸಚಿವ ಆನಂದ ಸಿಂಗ್ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಯಿಸಿದ ಈಶ್ವರಪ್ಪ ಸಂಪುಟ ರಚನೆ ಸಂದರ್ಭದಲ್ಲಿ ಕೆಲವರಿಗೆ ಅಸಮಾಧಾನ ಸಹಜ. ಇಬ್ಬರಿಂದ ಮೂರು ಜನರಿಗೆ ಬೇಸರ ಇದೆ ಎಂಬುದು ನನ್ನ ಗಮನಕ್ಕೆ ಇದೆ. ಸಿಎಂ ಬಸವರಾಜ ಬೊಮ್ಮಾಯಿ ಇದನ್ನು ಇತ್ಯರ್ಥ ಮಾಡುತ್ತಾರೆ ಎಂದರು.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ