Breaking News

ಪದೇಪದೆ ಪೆಟ್ರೋಲ್ ಬೆಲೆ ಬಗ್ಗೆ ಪ್ರಶ್ನಿಸಬೇಡಿ ಎಂದ ಜಿಎಂ ಸಿದ್ದೇಶ್ವರ್​ಗೆ ಪ್ರತಿಭಟನೆ ಬಿಸಿ; ಉಚಿತ ಪೆಟ್ರೋಲ್ ಕೊಡಲು ಆಗ್ರಹ

Spread the love

ದಾವಣಗೆರೆ: ಜಿಲ್ಲೆಯ ಜನರಿಗೆ ಉಚಿತವಾಗಿ ಪೆಟ್ರೋಲ್ ಕೊಡಿ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹ ವ್ಯಕ್ತಪಡಿಸಿದ್ದಾರೆ. ಜಿ.ಎಂ. ಸಿದ್ದೇಶ್ವರ್ ಕಚೇರಿಯ ಬಳಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ದಾವಣಗೆರೆಯ ಪಿಬಿ ರಸ್ತೆ ಬಳಿ ಇರುವ ಸಿದ್ದೇಶ್ವರ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೆಟ್ರೋಲ್ ನೀಡುವಂತೆ ಆಗ್ರಹಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಉಚಿತವಾಗಿ ಲಸಿಕೆ ಕೊಡುತ್ತಿದ್ದಾರೆ. ಹೀಗಾಗಿ ಸಿದ್ದೇಶ್ವರ್ ಉಚಿತವಾಗಿ ಪೆಟ್ರೋಲ್ ಕೊಡಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ಪೆಟ್ರೋಲ್ ಏರಿಕೆ ಬಗ್ಗೆ ಸಿದ್ದೇಶ್ವರ್‌ಗೆ ಪ್ರಶ್ನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿ.ಎಂ ಸಿದ್ದೇಶ್ವರ್, ಪದೇಪದೆ ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ನನ್ನನ್ನು ಪ್ರಶ್ನಿಸಬೇಡಿ ಎಂದು ಹೇಳಿದ್ದರು. ನಿಮಗೆ ಪೆಟ್ರೋಲ್ ಬೇಕಿದ್ದರೆ ಕೇಳಿ ನಾನು ಹಾಕಿಸ್ತೇನೆ ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಉಚಿತವಾಗಿ ಪೆಟ್ರೋಲ್ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಈಗ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ