Breaking News
Home / ರಾಜಕೀಯ / ಶೇ 100ರಷ್ಟು ಪ್ರೇಕ್ಷಕರಿಗೆ ಚಿತ್ರಮಂದಿರದಲ್ಲಿ ಅವಕಾಶ; ತಜ್ಞರ ಅಭಿಪ್ರಾಯ ಪಡೆದು ನಿರ್ಧಾರ: ಸಿಎಂ ಬೊಮ್ಮಾಯಿ

ಶೇ 100ರಷ್ಟು ಪ್ರೇಕ್ಷಕರಿಗೆ ಚಿತ್ರಮಂದಿರದಲ್ಲಿ ಅವಕಾಶ; ತಜ್ಞರ ಅಭಿಪ್ರಾಯ ಪಡೆದು ನಿರ್ಧಾರ: ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ಇಂದು ಫಿಲ್ಮ್ ಚೇಂಬರ್​ನವರು ಭೇಟಿಯಾಗಿ ಚಿತ್ರಮಂದಿರದಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಅವಕಾಶಕ್ಕೆ ಮನವಿ ಮಾಡಿದ್ದಾರೆ. ತಜ್ಞರ ಅಭಿಪ್ರಾಯ ಪಡೆದು ನಿರ್ಧರಿಸುವುದಾಗಿ ಹೇಳಿದ್ದೇನೆ. ಶೂಟಿಂಗ್ ವೇಳೆ ಆದ ದುರ್ಘಟನೆಗಳ ಬಗ್ಗೆ ಚರ್ಚಿಸಿದ್ದೇನೆ. ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳುವುದಕ್ಕೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿನಿಮಾ ಥಿಯೇಟರ್​ನಲ್ಲಿ ಶೇಕಡಾ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಮನವಿ ಮಾಡಿದ್ದೇವೆ. ಕೊರೊನಾದಿಂದ ಸಿನಿಮಾ ಕ್ಷೇತ್ರ ಭಾರಿ ನಷ್ಟದಲ್ಲಿದೆ. ಈ ನಷ್ಟ ಸರಿದೂಗಬೇಕಾದ್ರೆ ಸಿನಿಮಾ ಥಿಯೇಟರ್ ತೆರೆಯಲು ಅವಕಾಶ ಮಾಡಿಕೊಡಬೇಕು. ಇವಾಗ ಇರುವ 50ರಷ್ಟನ್ನು ಶೇಕಡಾ 100ರಷ್ಟು ತೆರೆಯಲು ಅವಕಾಶ ಮಾಡಿಕೊಡಬೇಕು. ಹೈ ಬಜೆಟ್ ಸಿನಿಮಾ ಬಂದ್ರೆ ಲೋ ಬಜೆಟ್ ಸಿನಿಮಾ ಗಳಿಗೆ ಅನುಕೂಲ ಆಗುತ್ತದೆ. ಹೀಗಾಗಿ ಸಿನಿಮಾ ಥಿಯೇಟರ್ 100 ರಷ್ಟು ತೆರೆಯಲು ಅವಕಾಶ ಮಾಡಿಕೊಡಬೇಕು ಎಂದು ನಿರ್ಮಾಪಕ ಸಾರಾ ಗೋವಿಂದ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ನೀಡಿದ ನಂತರ ತಿಳಿಸಿದರು.

ಮೇಕೆದಾಟು ಯೋಜನೆ ಸಂಬಂಧ ಕೇಂದ್ರದ ಜತೆ ಚರ್ಚೆ ನಡೆಸುತ್ತೇನೆ. ಶೀಘ್ರ ದೆಹಲಿಗೆ ತೆರಳಿ ಕೇಂದ್ರ ನೀರಾವರಿ ಸಚಿವರ ಭೇಟಿಯಾಗಿ ಮೇಕೆದಾಟು ಯೋಜನೆ ಕುರಿತು ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಬಳಿಕ ಕಾಮಗಾರಿ ಆರಂಭಿಸಲು ಒಪ್ಪಿಗೆ ಪಡೆಯುತ್ತೇವೆ ಎಂದು ಅವರು ತಿಳಿಸಿದರು.

ರಾಜ್ಯಾದ್ಯಂತ ಉದ್ಯಮ ವಿಸ್ತರಣೆ ನಮ್ಮ ಗುರಿ
ರಾಜ್ಯದಲ್ಲಿ ಉದ್ಯಮ ಸ್ಥಾಪನೆ ಸೇರಿದಂತೆ ರಾಜ್ಯಾದ್ಯಂತ ಉದ್ಯಮ ವಿಸ್ತರಣೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಲಾಗಿದ್ದ ಸಿ.ಐ.ಐ ವಾರ್ಷಿಕ ಸಭೆ- ಇಂಡಿಯಾ @75 ನಲ್ಲಿ ವರ್ಚುವಲ್ ಆಗಿ ಪಾಲ್ಗೊಂಡು ಅವರು ಮಾತನಾಡಿದರು.

ಕರ್ನಾಟಕ ಕೈಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಎನಿಸಿದೆ. ಸ್ವಾತಂತ್ರ್ಯ ನಂತರದಲ್ಲಿ ಕೌಶಲ್ಯ, ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವಿದೇಶಿ ಸಹಯೋಗಕ್ಕೆ ಅತ್ಯಂತ ಭದ್ರವಾದ ಬುನಾದಿಯನ್ನು ಹಾಕಲಾಗಿದೆ. ಇಡೀ ರಾಜ್ಯದಲ್ಲಿ ಉದ್ಯಮಶೀಲತೆಯನ್ನು ವಿಸ್ತರಿಸುವುದು ನಮ್ಮ ಸರ್ಕಾರದ ಗುರಿ ಎಂದು ಅವರು ಹೇಳಿದರು. ರಾಜ್ಯವನ್ನು ಬೆಳವಣಿಗೆಯತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಒಟ್ಟಾರೆ ಸಂಪನ್ಮೂಲಗಳನ್ನು ಶಕ್ತಿಯನ್ನಾಗಿ ಪರಿವರ್ತಿಸಲಾಗುವುದು. ವ್ಯವಸ್ಥೆಗಿಂತ ರಾಜ್ಯದ ಜನರು ಶ್ರೀಮಂತವಾಗಿರಬೇಕು ಎನ್ನುವುದು ನನ್ನ ಆಶಯ. ಶಿಕ್ಷಣ, ಕೌಶಲ್ಯ ಮತ್ತು ಉದ್ಯಮಶೀಲತೆಯ ಮೂಲಕ ಮಾನವ ಸಂಪನ್ಮೂಲವನ್ನು ಸಶಕ್ತಗೊಳಿಸಬೇಕು. ಪ್ರಾದೇಶಿಕ ಅಸಮಾನತೆಯ ನಿವಾರಣೆ ನಮ್ಮ ಆದ್ಯತೆಯಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ರಫ್ತು ಕ್ಷೇತ್ರದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿರಬೇಕು. ಇದಕ್ಕಾಗಿ ಉತ್ತಮ ಗುಣಮಟ್ಟದ ರಫ್ತು ಕೇಂದ್ರಿತ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದಾಗಬೇಕು. ನೂತನ ಕೈಗಾರಿಕಾ ನೀತಿ, ಕಾಯ್ದೆಗಳನ್ನು ಸರಳೀಕರಿಸಿದ್ದು ರಾಜ್ಯ ದಲ್ಲಿ ಹೂಡಿಕೆಯನ್ನು ಸುಲಭವಾಗಿಸಿದೆ. ಕೋವಿಡ್ ಹೊರತಾಗಿಯೂ ರಾಜ್ಯದ ಆರ್ಥಿಕ ಸ್ಥಿತಿ ಸ್ಥಿರವಾಗಿದ್ದು, ಕೈಗಾರಿಕಾ ಮತ್ತು ಸೇವಾ ವಲಯದಲ್ಲಿ ಹೂಡಿಕೆ ಮಾಡುವಂತೆ ವಿವಿಧ ಕಂಪನಿಗಳಿಗೆ ಬೊಮ್ಮಾಯಿ ಆಹ್ವಾನ ನೀಡಿದರು.

ಸಿ.ಐ.ಐ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ, ಉದ್ಯಮಿಗಳಾದ, ಅಜೀಮ್ ಪ್ರೇಮ್ ಜಿ, ಕಿರಣ್ ಮಜುಂದಾರ್ ಷಾ, ಹಾಗೂ ಸಿ.ಐ.ಐ.ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ