ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾದ ಹಾಲಪ್ಪ ಆಚಾರ್ ಮತ್ತು ನಿಗಮದ ಅಧ್ಯಕ್ಷರಾದ ಲಿಂಗಮೂರ್ತಿ ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐದು ಕೋಟಿ ರೂಪಾಯಿಗಳ ಚೆಕ್ ಅನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಡೆದ ಮೊದಲ ಚೆಕ್ ಇದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.
Laxmi News 24×7