Breaking News

ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದವರಿಗೆ ಮಾತ್ರ ಮಾಲ್ ಪ್ರವೇಶಕ್ಕೆ ಅನುಮತಿ

Spread the love

ಮುಂಬೈ: ಕೋವಿಡ್ ಲಸಿಕೆಯ ಎರಡು ಡೋಸ್ ಗಳನ್ನು ಪಡೆದವರಿಗೆ ಮಾತ್ರ ಮುಂಬೈ ಹಾಗೂ ಮಹಾರಾಷ್ಟ್ರದ ಇತರ ನಗರಗಳಲ್ಲಿನ ಮಾಲ್‌ಗಳಿಗೆ ಪ್ರವೇಶಿಸಲು ಅನುಮತಿ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.

ಇಂದು ಸಂಪುಟ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ, ಆಗಸ್ಟ್ 15 ರಿಂದ ಸರಕಾರವು ಕೋವಿಡ್ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಲಿದೆ ಎಂದು ಹೇಳಿದರು.

“ಡಬಲ್ ಡೋಸ್ ಪಡೆದಿರುವ ಜನರು ಸ್ಥಳೀಯ ರೈಲುಗಳನ್ನು ಹತ್ತಬಹುದು. ರಾಜ್ಯ ಸರಕಾರವು ಜನರಿಗೆ ಮಾಸಿಕ ಹಾಗೂ ತ್ರೈಮಾಸಿಕ ಪಾಸ್‌ಗಳನ್ನು ನೀಡಲು ಸೂಚನೆಗಳನ್ನು ನೀಡಿದೆ” ಎಂದು ಅವರು ಹೇಳಿದರು.

ರಾತ್ರಿ 10 ರವರೆಗೆ ರೆಸ್ಟೋರೆಂಟ್‌ಗಳನ್ನು ಶೇಕಡಾ 50 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲಾಗುವುದು ಎಂದು ಸಚಿವರು ಹೇಳಿದರು. ಅಂಗಡಿಗಳು ಸಹ ರಾತ್ರಿ 10 ರವರೆಗೆ ತೆರೆದಿರುತ್ತವೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ