Breaking News

ಸ್ವಾತಂತ್ರ್ಯ ದಿನಾಚರಣೆಯ ಸಿದ್ದತೆ: ಅಧಿಕಾರಿಗಳಿಂದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪರಿಶೀಲನೆ

Spread the love

ಬೆಂಗಳೂರು :ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಿದ್ಧತೆಯನ್ನ ನಡೆಸಲಾಗುತ್ತಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ನೂತನ ಸಿಎಂ ಬಸವರಾಜ ಬೊಮ್ಮಾಯಿ ರವರಿಂದ ಧ್ವಜಾರೋಹಣ ನಡೆಯುತ್ತದೆ.

ಆದ್ದರಿಂದ ಪೊಲೀಸ್ ಆಯುಕ್ತ ಕಮಲ್ ಪಂಥ್, ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಬೆಂಗಳೂರು ನಗರ ಡಿಸಿ ಮಂಜುನಾಥ್, ಪರಿಶೀಲನೆ ನಡೆಸಿದ್ದಾರೆ. ಇವರ ಜೊತೆಗೆ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ರವರು ಸಾಥ್ ನೀಡಿದ್ದಾರೆ. ಇನ್ನೂ ಆಗಸ್ಟ್ 15ರಂದು ನಡೆಯಲಿರುವ ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ, ಮಹಿಳಾ ಸಿಆರ್ ಪಿಎಫ್, ಹೋಂ ಗಾರ್ಡ್ಸ್, ಅಗ್ನಿಶಾಮಕ ದಳದಿಂದ ಡೆಮೋ ನಡೆಸಲಾಗಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ