Breaking News

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡದಿದ್ದರೆ ಮತ್ತೆ ಸತ್ಯಾಗ್ರಹ : ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

Spread the love

ಹುಬ್ಬಳ್ಳಿ : ರಾಜ್ಯ ಸರ್ಕಾರವು ಸೆಪ್ಟೆಂಬರ್ 15 ರೊಳಗೆ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ನೀಡದಿದ್ದರೆ ಅಕ್ಟೋಬರ್ 1 ರಿಂದ ಧರಣಿ ಸತ್ಯಾಗ್ರಹ ಮುಂದುವರೆಯಲಿದೆ ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ಪಂಚಮಸಾಲಿ ಸಮುದಾಯಕ್ಕೆ ಸೆಪ್ಟೆಂಬರ್ 15 ರೊಳಗೆ ಪ್ರವರ್ಗ 2ಎ ಮೀಸಲಾತಿ ನೀಡಲು ಕೈಗೊಳ್ಳುವುದಾಗಿ ಆಗಿನ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಇದೀಗ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದು, ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರ ಸೆಪ್ಟೆಂಬರ್ 15 ರೊಳಗೆ ಬೇಡಿಕೆ ಈಡೇರದಿದ್ದರೆ ಅಕ್ಟೋಬರ್ 1 ರಿಂದ ಸತ್ಯಾಗ್ರಹ ಮತ್ತೆ ಮುಂದುವರೆಯಲಿದೆ. ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಧೇಯವಾಕ್ಯದಡಿ ಇಷ್ಟಲಿಂಗ ಪೂಜೆ ಮೂಲಕ ಜನಜಾಗೃತಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ