Breaking News

ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ ಭಾರತ ಮಾತೆ ಉಳಿಸಿಕೊಳ್ಳಬಹುದು: ಸಿಟಿ ರವಿಗೆ ಎಚ್​ಡಿಕೆ ತಿರುಗೇಟು

Spread the love

ರಾಮನಗರ: ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ, ಭಾರತ ಮಾತೆಯನ್ನು ಉಳಿಸಿಕೊಳ್ಳಬಹುದು ಎನ್ನುವ ಮೂಲಕ ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ ಎಂದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇಕೆದಾಟು ವಿಚಾರವಾಗಿ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಅಲ್ಲದೆ, ಮುಖ್ಯಮಂತ್ರಿಗಳ ಬಳಿ ಸಮಯ ಕೇಳಿದ್ದು, ಸುಧೀರ್ಘವಾಗಿ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

ಸರ್ಕಾರ ಹಾಗೂ ನೀರಾವರಿ ಮಂತ್ರಿಗಳು ಯೋಜನೆ ಪ್ರಾರಂಭ ಮಾಡಲು ಯಾರ ಅಪ್ಪಣೆ ಬೇಕಿಲ್ಲ ಎಂದು ಹೇಳಿದ್ದಾರೆ. ಈಗಾಗಲೇ ಸಮಯವನ್ನ ವ್ಯರ್ಥ ಮಾಡಲಾಗಿದೆ. ಆದಷ್ಟು ಈ ಬಗ್ಗೆ ತಾರ್ಕಿಕ ಅಂತ್ಯಕ್ಕೆ ಬರಬೇಕಿದೆ ಎಂದು ತಿಳಿಸಿದರು.

ಮೇಕೆದಾಟು ವಿಚಾರವಾಗಿ ಸಿ.ಟಿ ರವಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಸಿ.ಟಿ.ರವಿ ಅವರು ಈಗಾಗಲೇ ರಾಷ್ಟ್ರ ಘಟಕದ ಪ್ರಧಾನ ಕಾರ್ಯದರ್ಶಿ ಆದ ಮೇಲೆ ಭಾರತೀಯರಾಗಿ ಕನ್ನಡ ಮರೆತಿದ್ದಾರೆ. ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ ಭಾರತದ ತಾಯಿ ಉಳಿಸಿಕೊಳ್ಳಬಹುದು. ಅವರು ಮೊದಲು ಇದನ್ನು ಅರಿತುಕೊಳ್ಳಬೇಕು ಎಂದು ತಿರುಗೇಟು ನೀಡಿದರು.

ಈ ವಾರದಲ್ಲಿ ಸಿಎಂ ಅವರನ್ನು ನಮ್ಮ ಪಕ್ಷದ ನಿಯೋಗದಿಂದ ಮೇಕೆದಾಟು ವಿಚಾರವಾಗಿ ಭೇಟಿ ಮಾಡಲಿದ್ದೇವೆ ಎಂದು ರಾಮನಗರದಲ್ಲಿ ಮಾಜಿ ಸಿ.ಎಂ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳಿಗೆ ತಿಳಿಸಿದರು.


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ