Breaking News

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಈ ಬಾರಿ ಪಕ್ಷದ ಚಿಹ್ನೆ ಮೇಲೆ ನಡೆಯುವುದು ಫಿಕ್ಸ್ ಆಗಿದೆ.

Spread the love

ಬೆಂಗಳೂರು – ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಈ ಬಾರಿ ಪಕ್ಷದ ಚಿಹ್ನೆ ಮೇಲೆ ನಡೆಯುವುದು ಫಿಕ್ಸ್ ಆಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣೆಗೆ ಸಜ್ಜಾಗುತ್ತಿದ್ದು, ಉಸ್ತುವಾರಿಗಳನ್ನು ನೇಮಿಸಲಾಗಿದೆ.

ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಸ್ತುವಾರಿ ಸಚಿವಗೋವಿಂದ ಕಾರಜೋಳ ಮತ್ತು ಶಾಸಕ ಅಭಯ ಪಾಟೀಲ ಅವರಿಗೆ ಚುನಾವಣೆ ಹೊಣೆ ವಹಿಸಿದೆ. ಕಾಂಗ್ರೆಸ್ ಮಾಜಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಜವಾಬ್ದಾರಿ ನೀಡಿದೆ. ತನ್ಮೂಲಕ ಚುನಾವಣೆಗೆ ಎಲ್ಲ ಸಿದ್ಧತೆ ಆರಂಭವಾಗಿದೆ. 

ಬಿಜೆಪಿ ಹುಬ್ಬಳ್ಳಿ -ಧಾರವಾಡಕ್ಕೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಮಹೇಶ ಟೆಂಗಿನಕಾಯಿ, ಕಲಬುರಗಿಗೆ ಸಚಿವ ಮುರುಗೇಶ ನಿರಾಣಿ ಮತ್ತು ರವಿ ಕುಮಾರ ಹೆಗಲಿಗೆ ಬಿಜೆಪಿ ಹೊಣೆ ವಹಿಸಲಾಗಿದೆ.

ಸೆಪ್ಟಂಬರ್ 3ರಂದು ಈ ಮೂರೂ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ. ಬಹಳ ವರ್ಷಗಳ ನಂತರ ಬೆಳಗಾವಿ ಪಾಲಿಕೆಗೆ ಪಕ್ಷದ ಆಧಾರದ ಮೇಲೆ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಈವರೆಗೆ ಭಾಷೆ ಆಧಾರದ ಮೇಲೆ ಚುನಾವಣೆ ನಡೆಯುತ್ತಿತ್ತು.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ