Breaking News
Home / ರಾಜಕೀಯ / ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ, ಯಾವುದೇ ಸಂದರ್ಭದಲ್ಲಿ ಪತನ:ಸಿದ್ದರಾಮಯ್ಯ

ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ, ಯಾವುದೇ ಸಂದರ್ಭದಲ್ಲಿ ಪತನ:ಸಿದ್ದರಾಮಯ್ಯ

Spread the love

ಗೊಂದಲ ಮುಂದುವರಿದಿದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದು ಅನುಮಾನ. ಯಾವುದೇ ಸಂದರ್ಭದಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ್, ರಾಮದಾಸ ಮತ್ತಿತರ ಶಾಸಕರು ದೆಹಲಿಗೆ ಹೋಗಿ ಬಂದು ಮಾಡುತ್ತಿದ್ದಾರೆ. ಹೀಗಾಗಿ ಈ ಸರ್ಕಾರ ಬಹಳ ದಿನ ಬಾಳುವುದಿಲ್ಲ ಎಂದರು.

ಕೋವಿಡ್ ಮೂರನೇ ಅಲೆ ಆರಂಭವಾಗುತ್ತಿದೆ. ಕೊಡಗು, ದಕ್ಷಿಣ ಕನ್ನಡ, ಮೈಸೂರು ಸೇರಿದಂತೆ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು. ಮೂರನೇ ಅಲೆಯಿಂದ ಜನ ತೊಂದರೆಗೆ ಒಳಗಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ. ವಾರಾಂತ್ಯದ ಲಾಕ್‌ ಡೌನ್ ಘೋಷಣೆ ಮಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಸೋಂಕು ಹರಡದಂತೆ ಮುಂಜಾಗ್ರತೆ ವಹಿಸುವುದು ಉತ್ತಮ ಎಂದು ಅವರು ಹೇಳಿದರು.

ಶಾಲಾರಂಭ ಬೇಡ: ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಬರದಿದ್ದರೆ ಶಾಲೆ, ಕಾಲೇಜುಗಳನ್ನು ಆರಂಭಿಸುವುದು ಸೂಕ್ತವಲ್ಲ. ಇದರಿಂದ ಮಕ್ಕಳನ್ನು ನಾವೇ ತೊಂದರೆಗೆ ದೂಡಿದಂತೆ ಆಗುತ್ತದೆ. ಜನಜಂಗುಳಿ ಹೆಚ್ಚಾಗಿರುವ ಕಾರ್ಯಕ್ರಮಗಳಿಗೆ ಸರ್ಕಾರ ಅನುಮತಿ ನೀಡಬಾರದು. ಈ ಒಂದು ವರ್ಷ ಹಬ್ಬ ಹರಿದಿನ, ಜಾತ್ರೆಗಳನ್ನು ಮಾಡದಿರುವುದು ಉತ್ತಮ. ಮುಂದಿನ ತಿಂಗಳು ಗಣೇಶನ ಹಬ್ಬ. ಸಾಧ್ಯವಾದಷ್ಟು ಮನೆಗಳಲ್ಲಿಯೇ ಮೂರ್ತಿ ಕೂರಿಸಿ ಪೂಜಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಎಂಟಿಬಿ ಭೇಟಿಯಲ್ಲಿ ವಿಶೇಷವಿಲ್ಲ: ನಾನು ಮತ್ತು ಸಚಿವ ಎಂಟಿಬಿ ನಾಗರಾಜ್ ನಿನ್ನೆ ಹೊಸಕೋಟೆಯಲ್ಲಿ ಭೇಟಿಯಾಗಿದ್ದುದು ನಿಜ. ಆದರೆ ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಲಿಲ್ಲ. ಬಿಜೆಪಿಯವರ ಜೊತೆ ರಾಜಕೀಯ ಮಾತನಾಡುವುದೂ ಇಲ್ಲ. ಬಿಜೆಪಿಯವರು ಅಧಿಕಾರದಿಂದ ತೊಲಗಲಿ ಎಂದು ಹೇಳುವವನು ನಾನು ಎಂದರು


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ