Breaking News

ಇನ್ನಾದರೂ ಸುಳ್ಳು ಹೇಳುವುದನ್ನು ನಿಲ್ಲಿಸಿ’: ಶಾಸಕ ಶ್ರೀನಿವಾಸ್- ಸಂಸದ ಬಸವರಾಜ್ ಮಾತಿನ ಸಮರ

Spread the love

ತುಮಕೂರು: 500 ಕೋಟಿ ರೂಪಾಯಿ ಅನುದಾನ ವಿಚಾರವಾಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಮತ್ತು ಸಂಸದ ಜಿ.ಎಸ್.ಬಸವರಾಜ್ ನಡುವೆ ಮಾತಿನ ಜಟಾಪಟಿ ನಡೆದ ಪ್ರಸಂಗ ಶನಿವಾರ ನಡೆಯಿತು.

ಗುಬ್ಬಿ ತಾಲೂಕಿನ ಸಿ. ನಂದಿಹಳ್ಳಿಯಲ್ಲಿ ಬೆಸ್ಕಾಂ ವಿದ್ಯುತ್ ಎಂಎಸ್‌ಎಸ್ ಘಟಕ ಉದ್ಘಾಟನಾ ಸಮಾರಂಭದ ವೇಳೆ ಈ ಘಟನೆ ನಡೆದಿದೆ.

ಭಾಷಣ ಮಾಡುವ ವೇಳೆ ಸಂಸದ ಬಸವರಾಜು ಅವರು, ಚೇಳೂರು ಹೋಬಳಿಯಲ್ಲಿ ಚೆಕ್ ಡ್ಯಾಂ ನಿರ್ಮಿಸಲು ಕೇಂದ್ರ ಸರ್ಕಾರದಿಂದ 550 ಕೋಟಿ ರೂಪಾಯಿ ಅನುದಾನ ತಂದಿದ್ದೇನೆ ಎಂದರು. ಇದರಿಂದ ಕುಪಿತರಾದ ಶಾಸಕ ಶ್ರೀನಿವಾಸ್, ರೈತರಿಗೆ ಸುಳ್ಳು ಯಾಕೆ ಹೇಳುತ್ತೀರಿ? ನಿಮಗೆ ವಯಸ್ಸಾಗಿದೆ ಈಗಲಾದರೂ ಸುಳ್ಳು ಹೇಳುವುದನ್ನು ನಿಲ್ಲಿಸಿ ಎಂದಿದ್ದಾರೆ.

 

ಇದರಿಂದ ಕೋಪಗೊಂಡ ಸಂಸದರು, ನಾನು ಜೀವನದಲ್ಲಿ ಸುಳ್ಳು ಹೇಳಿಲ್ಲ. ಇವರ ಮಾತು ನಂಬಬೇಡಿ ನಾನು ಹಲವು ಯೋಜನೆಗಳನ್ನು ತಂದಿದ್ದೇನೆ. 550 ಕೋಟಿ ರೂ ಅನುದಾನ ತಂದಿದ್ದೇನೆ ಎಂದು ಹೇಳಿದರು.

ಕುಪಿತರಾದ ಶಾಸಕ ಶ್ರೀನಿವಾಸ್, ನಿನ್ನ ಯೋಗ್ಯತೆಗೆ ಬೆಂಕಿ ಹಾಕಾ! ಬರಿ ಸುಳ್ಳು ಹೇಳಿಕೊಂಡು ಕಾಲ ಕಳೆಯುತ್ತಿದ್ದೀರಿ. ವಯಸ್ಸಾಗಿದೆ ಈಗಲಾದರೂ ಮಾನ ಮರ್ಯಾದೆಯಿಂದ ಇರಬಾರದೇ? 550 ಕೋಟಿ ಯಾರು ನಿಮ್ಮ ತಾತ ತಂದಿದ್ದನಾ? 550 ಕೋಟಿ ಎಲ್ಲಿ ತಂದಿದ್ದೀರಿ ತೋರಿಸಿ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ