Breaking News

ಶಿವಮೊಗ್ಗ – ಗದಗ ರಾಜ್ಯ ಹೆದ್ದಾರಿಯಲ್ಲಿ ಭತ್ತದ ನಾಟಿ

Spread the love

ಹಾವೇರಿ: ಹಾವೇರಿಯಲ್ಲಿ ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಹಾದು ಹೋಗಿರುವ ಶಿವಮೊಗ್ಗ – ಗದಗ ರಾಜ್ಯ ಹೆದ್ದಾರಿಯಲ್ಲಿ ಜನರು ಭತ್ತದ ನಾಟಿ ಮಾಡುವ ಮೂಲಕ ವಿನೂತನವಾಗಿ ಆಡಳಿತದ ಗಮನ ಸೇಳೆದರು.

ಸೋಮವಾರ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿ 26 ರಲ್ಲಿ ಕಳೆದ ಮೂವತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ರಸ್ತೆ ಕೇಸರು ಗದ್ದೆಯಾಗಿ ನಿರ್ಮಾಣವಾಗಿದೆ. ಆದರೆ ಜಿಲ್ಲಾಡಳಿತ, ತಾಲ್ಲೂಕಾಡಳಿತ ಮಾತ್ರ ಇತ್ತ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ರಟ್ಟಿಹಳ್ಳಿ ತಾಲ್ಲೂಕು ಹಳ್ಳೂರು ಗ್ರಾಮದಿಂದ ಸುಮಾರ 25 ಕಿ.ಮಿ. ರಸ್ತೆ ಹಾಳಾಗಿದೆ. ಈ ರಸ್ತೆಯನ್ನು ದುರಸ್ಥಿ ಮಾಡುವಂತೆ ಹಲವು ಬಾರಿ ಒತ್ತಾಯಿಸಿದ್ದರು. ಸಹ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಬಾರಿ‌ ಹೆಚ್ಚು ಮಳೆಯಾದ ಪರಿಣಾಮ ರಾಜ್ಯ ಹೆದ್ದಾರಿ ಭತ್ತ ಗದ್ದೆ ಮಾರ್ಪಟ್ಟಿದೆ.ಇದರಿಂದ ತಕ್ಷಣ ಜಿಲ್ಲಾಡಳಿತ ರಸ್ತೆ ದುರಸ್ತಿಗೆ ಮುಂದಾಗಬೇಕೆಂದು ಒತ್ತಾಯಿಸಿ, ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ