Home / ರಾಜಕೀಯ / ಹೇಳಿಕೆಗಳಿಂದ ನಾಯಕನಾಗಲು ಸಾಧ್ಯವಾಗಲ್ಲ,ಕೆಲಸ ಮಾಡಬೇಕು: ವಿಜಯೇಂದ್ರ

ಹೇಳಿಕೆಗಳಿಂದ ನಾಯಕನಾಗಲು ಸಾಧ್ಯವಾಗಲ್ಲ,ಕೆಲಸ ಮಾಡಬೇಕು: ವಿಜಯೇಂದ್ರ

Spread the love

ಶಿವಮೊಗ್ಗ: ಯಾವುದೇ ಹೇಳಿಕೆಗಳಿಂದ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿಲ್ಲ. ಅದರ ಬದಲು ಜನಪರ ಕೆಲಸ ಮಾಡುವ ಮೂಲಕ ಸಂಘಟನೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಎರಡು ಪೆಗ್ ಬೇಕು ಎಂಬ ಹೇಳಿಕೆಗಳಿಗೆ ತಿರುಗೇಟು ನೀಡಿದರು.

ಬಹಳಷ್ಟು ಜನ ಎಲುಬಿಲ್ಲದ ನಾಲಿಗೆ ರೀತಿ ವರ್ತಿಸುತ್ತಿದ್ದಾರೆ. ಇದನ್ನು ನಾವೆಲ್ಲರೂ ಗಮನಿಸುತ್ತಿದ್ದೇವೆ. ಹೇಳಿಕೆಗಳನ್ನು ಕೊಡುವುದರ ಮೂಲಕ ನಾಯಕತ್ವ ಬೆಳೆದುಬಿಡುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ವಾಜಪೇಯಿಯಂತಹ ನಾಯಕರ ಬಗ್ಗೆ ಮಾತನಾಡುವುದು, ಯಾವುದೇ ಪಕ್ಷದವರಿಗೆ ಶೋಭೆ ತರುವುದಿಲ್ಲ ಎಂದರು.

ವರಿಷ್ಠರು ನಿರ್ಧರಿಸುತ್ತಾರೆ: ಯಡಿಯೂರಪ್ಪ ಅವರು ಹಿಂದೆ ರಾಜ್ಯದಲ್ಲಿ ಹೋರಾಟ ಮಾಡಿದ್ದರು. ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು, ಮಂತ್ರಿಯಾಗಬೇಕು, ಮುಖ್ಯಮಂತ್ರಿಯಾಗಬೇಕೆಂ ಉದ್ದೇಶವಿಟ್ಟುಕೊಂಡು ಹೋರಾಟ ಮಾಡಲಿಲ್ಲ. ರಾಘವೇಂದ್ರ ಅವರಾಗಲಿ, ನಾನಾಗಲಿ ಯಾವುದೇ ಸ್ಥಾನ ಗುರುತಿಸಿಕೊಂಡು ಕೆಲಸ ಮಾಡ್ತಿಲ್ಲ. ಮಾಡುತ್ತಿರುವ ಕೆಲಸವನ್ನು ಜನ ಗುರುತಿಸಬೇಕು. ನಾವಾಗಿಯೇ ಮಂತ್ರಿಯಾಗಬೇಕು, ಪಕ್ಷದ ರಾಜ್ಯಾಧ್ಯಕ್ಷ ಆಗಬೇಕು ಎನ್ನುವಂತಹ ಪ್ರಶ್ನೆ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ಯಾವುದೇ ಪ್ರಾದೇಶಿಕ ಪಕ್ಷವಲ್ಲ. ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರು ಇದ್ದಾರೆ. ಯಾವಾಗ ಯಾವ ಸ್ಥಾನಮಾನ ಕೊಡಬೇಕು ಎಂಬುದನ್ನ ಪಕ್ಷದ ಮುಖಂಡರು ತೀರ್ಮಾನ ಮಾಡುತ್ತಾರೆ ಎಂದು ವಿಜಯೇಂದ್ರ ಹೇಳಿದರು.

ಹಳೇ ಮೈಸೂರು ಭಾಗಕ್ಕೆ ಒತ್ತು: ರಾಜ್ಯದ ಉಪಾಧ್ಯಕ್ಷನಾಗಿ ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಬೇಕಾಗುತ್ತದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರಿಗೆ ಹಳೆ ಮೈಸೂರು ಭಾಗಕ್ಕೆ ಹೆಚ್ಚು ಒತ್ತು ಕೊಡಬೇಕು ಎಂಬ ಅಪೇಕ್ಷೆ ಅವರಿಗೆ ಇದೆ. ಕೆ.ಆರ್.ಪೇಟೆ, ಶಿರಾ ಉಪ ಚುನಾವಣೆ ಸಂದರ್ಭದಲ್ಲಿ ಅಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡಿದ್ದೆ. ಆ ಭಾಗದಲ್ಲಿ ಪಕ್ಷವನ್ನು ಇನ್ನು ಗಟ್ಟಿಗೊಳಿಸಲು ಅವಕಾಶ ಇದೆ ಎಂದರು.

 

ಯಾವುದೇ ವಿಧಾನಸಭೆ ಚುನಾವಣೆ ನಡೆದ ಸಂದರ್ಭದಲ್ಲಿ ಬಿಜೆಪಿ 104, 110 ಸ್ಥಾನಕ್ಕೆ ಬಂದು ನಿಂತಿತ್ತು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕು ಎಂಬುದು ಯಡಿಯೂರಪ್ಪನವರ ಕನಸು. ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಕನಸು ಸಹ ಅದೇ ಆಗಿದೆ. ಆ ಕನಸು ನನಸು ಆಗಬೇಕು ಅಂದರೆ ಹಳೆ ಮೈಸೂರು ಭಾಗಕ್ಕೆ ಹೆಚ್ಚು ಒತ್ತು ಕೊಡಬೇಕಿದೆ. ಹೀಗಾಗಿಯೇ ಆ ಭಾಗದಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದೇನೆ ಎಂದು ವಿಜಯೇಂದ್ರ ಹೇಳಿದರು.

ತಮ್ಮ ವಿರುದ್ಧ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರಯತ್ನಿಸಿದ ಅವರು, ಯತ್ನಾಳ್ ಹಿರಿಯರಿದ್ದಾರೆ. ನನ್ನ ಮೇಲೆ ಪ್ರೀತಿ ಜಾಸ್ತಿ ಅನಿಸುತ್ತೆ. ಹೀಗಾಗಿ ಅವರ ಹೇಳಿಕೆ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರಕ್ಕೆ ಪ್ರಯತ್ನಿಸಿದ ವಿಜಯೇಂದ್ರ, ಇದರ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ರಾಜ್ಯ ಮಟ್ಟದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಈ ಬಗ್ಗೆ ಚರ್ಚೆ ನಡೆಯುತ್ತಿವೆ ಎಲ್ಲಿಯವರೆಗೆ ಹೋಗುತ್ತದೆ ನೋಡೋಣ ಎಂದರು.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ