Breaking News

30 ಸಾವಿರ ಲಂಚ ಪಡೆಯುತ್ತಿರುವಾಗACB ಬಲೆಗೆ ಬಿದ್ದ DHO

Spread the love

ಯಾದಗಿರಿ: ಸ್ಟಾಫ್ ನರ್ಸ್ ನೇಮಕಾತಿ ವೇಳೆಯಲ್ಲಿ ಅಭ್ಯರ್ಥಿಯೊಬ್ಬರಿಂದ 30 ಸಾವಿರ ಲಂಚ ಪಡೆಯುತ್ತಿರುವಾಗ ಯಾದಗಿರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.ಸದ್ಯ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವ ಹಿನ್ನೆಲೆ ಆರೋಗ್ಯ ಇಲಾಖೆಯ ಅಗತ್ಯ ಸಿಬ್ಬಂದಿಯ ಭರ್ತಿ ಕಾರ್ಯ ನಡೆಯುತ್ತಿತ್ತು. ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯಾಧಿಕಾರಿ ಎಸ್.ಎಂ. ಪಾಟೀಲ್ ಭರ್ತಿ ಕಾರ್ಯದ ಮುಖ್ಯಸ್ಥರಾಗಿದ್ದರು. ನೇಮಕಾತಿಗಾಗಿ ಒಬ್ಬೊಬ್ಬ ಅಭ್ಯರ್ಥಿಯಿಂದ 30 ರಿಂದ 50 ಸಾವಿರ ಲಂಚದ ಬೇಡಿಕೆ ಇಟ್ಟಿರುವ ಬಗ್ಗೆ ಎಸಿಬಿಗೆ ದೂರುಗಳು ಬಂದಿದ್ದಿವು.

ಈ ಬಗ್ಗೆ ಖಚಿತಪಡಿಸಿಕೊಂಡ ಎಸಿಬಿ ಅಧಿಕಾರಿಗಳು, ನೊಂದ ಅಭ್ಯರ್ಥಿಯನ್ನು ಬಳಸಿಕೊಂಡು ಡಿಹೆಚ್‍ಓ ಲಂಚ ಸ್ವೀಕರಿಸುವಾಗ ದಾಳಿ ಮಾಡಿದೆ. ಇನ್ನೂ ದಾಳಿಯ ಬಳಿಕ ಡಿಹೆಚ್‍ಓ ಮತ್ತು ಇತರೆ ಅಧಿಕಾರಿಗಳನ್ನು ಎಸಿಬಿ ಅಧಿಕಾರಿಗಳು ತೀವ್ರವಾಗಿ ವಿಚಾರಣೆ ನಡೆಸಿದ್ದಾರೆ. ಈ ದಾಳಿಯಲ್ಲಿ ಯಾದಗಿರಿ ಮತ್ತು ಕಲಬುರಗಿ ಎಸಿಬಿ ಅಧಿಕಾರಿಗಳು ಭಾಗಿಯಾಗಿದ್ದರು.

 


Spread the love

About Laxminews 24x7

Check Also

ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು.

Spread the loveಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ