Breaking News

ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: ಜೊಲ್ಲೆ

Spread the love

ಚಿಕ್ಕೋಡಿ: ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಪ್ರವಾಹ ಪೀಡಿತ ಸಿದ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನೆರೆಯಿಂದ ಮನೆ, ಬೆಳೆ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಗಳನ್ನು ನಾನು ಮನಗಂಡಿದ್ದೇನೆ. ಹೀಗಾಗಿ ನಿಮ್ಮೆಲ್ಲರ ಸಮಸ್ಯೆಗೆ ಶೀಘ್ರದಲ್ಲಿ ಬಿಜೆಪಿ ಸರ್ಕಾರದ ವತಿಯಿಂದ ಸಿಗುವ ಪರಿಹಾರವನ್ನು ಸೂಕ್ತ ರೀತಿಯಲ್ಲಿ ತಲುಪಿಸಲಾಗುವುದು ಎಂದು ಹೇಳಿದರು. 

ಸರ್ಕಾರ ಈಗಾಗಲೇ ಸಂತ್ರಸ್ತರಿಗೆ ಪರಿಹಾರ ಧನವನ್ನ ಹೆಚ್ಚಿಸಿ ಆದೇಶ ಹೊರಡಿಸಿದ್ದು, ಪ್ರತಿ ಸಂತ್ರಸ್ಥರಿಗೂ ಪರಿಹಾರ ದೊರಕಿಸಿಕೊಡುವ ಭರವಸೆಯನ್ನ ಶಶಿಕಲಾ ಜೊಲ್ಲೆ ನೀಡಿದರು. ಬಳಿಕ ಉದ್ಯೋಗ ಸಮೂಹದ ವತಿಯಿಂದ 224 ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಗ್ರಿಗಳ ಕಿಟ್‍ಗಳನ್ನು ಸಚಿವರು ವಿತರಿಣೆ ಮಾಡಿದರು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ